ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತಾಲ್ಲೂಕು ಮಟ್ಟದ ಕ್ರೀಡಾಕೂಟ: ಲಿಂಗದಹಳ್ಳಿ ಪ.ಪೂ ಕಾಲೇಜಿಗೆ ಸಮಗ್ರ ಪ್ರಶಸ್ತಿ

Published : 31 ಆಗಸ್ಟ್ 2024, 13:19 IST
Last Updated : 31 ಆಗಸ್ಟ್ 2024, 13:19 IST
ಫಾಲೋ ಮಾಡಿ
Comments

ತರೀಕೆರೆ: ಪಟ್ಟಣದ ಮಾನಸ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಲಿಂಗದಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಪಡೆದಿದ್ದಾರೆ ಎಂದು ಪ್ರಾಂಶುಪಾಲ ಸಿ.ಆರ್. ಜಯಪ್ಪ ಹೇಳಿದರು.

ಬಾಲಕರ ವಿಭಾಗ: 200 ಮೀ., 800 ಮೀ., 500 ಮೀ., 3,000 ಮೀ. ಓಟ ಮತ್ತು 5000 ಮೀ. ನಡಿಗೆ, ಎತ್ತರ ಜಿಗಿತ, ಗುಂಡು ಎಸೆತ, ಗುಂಪು ಸ್ಪರ್ಧೆಗಳಾದ ವಾಲಿಬಾಲ್, ಕಬಡ್ಡಿ, ಕೊಕ್ಕೊ, ಥ್ರೋಬಾಲ್, ಶೆಟಲ್ ಬ್ಯಾಡ್ಮಿಂಟನ್ ಸಿಂಗಲ್ಸ್ ಮತ್ತು ಡಬಲ್ಸ್ ವಿಭಾಗಗಳಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬಾಲಕಿಯರ ವಿಭಾಗ: 400 ಮೀ., 800 ಮೀ. ಓಟ, 3000 ಮೀ. ನಡಿಗೆ, ಗುಂಡು ಎಸೆತ, ಚಕ್ರ ಎಸೆತ, ಜಾವಲಿನ್ ಎಸೆತ, 4 X 100 ಮೀ., 4 X 400 ಮೀ. ರಿಲೆ, ಟ್ರಿಪಲ್ ಜಂಪ್, ಕೊಕ್ಕೊ, ಥ್ರೋಬಾಲ್, ಹ್ಯಾಮರ್ ಎಸೆತಗಳಲ್ಲಿ ಗೆಲವು ಸಾಧಿಸುವ ಮೂಲಕ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಗೆ ಶ್ರಮಿಸಿದ ಉಪನ್ಯಾಸಕರು, ಕಾಲೇಜು ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ತಮ್ಮಯ್ಯ ಮತ್ತು ಪದಾಧಿಕಾರಿಗಳು ಬಹುಮಾನ ವಿತರಣೆ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT