ತರೀಕೆರೆ: ಕೆಲ ದೇಶಗಳಲ್ಲಿ ಕಠಿಣ ಕಾನೂನುಗಳಡಿ ಜನ ಗುಲಾಮರಂತೆ ಬದುಕುತ್ತಿದ್ದಾರೆ. ಆದರೆ ನಮ್ಮ ದೇಶದ ಜನರು ಸ್ವತಂತ್ರವಾಗಿ ಬದುಕುತ್ತಿರುವುದಕ್ಕೆ ಡಾ.ಅಂಬೇಡ್ಕರ್ ಅವರು ಬರೆದ ಸಾರ್ವಕಾಲಿಕ ಸಂವಿಧಾನವೇ ಕಾರಣ ಎಂದು ತಹಶೀಲ್ದಾರ್ ರಶ್ಮಿ ಎಚ್.ಜೆ. ಹೇಳಿದರು.

ಪಟ್ಟಣದ ಅಂಬೇಡ್ಕರ್ ಭವದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪುರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಹಾಗೂ ಬಾಬು ಜಗಜೀವನ ರಾಂ ಅವರ 119ನೇ ಜನ್ಮ ದಿನಾಚರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಅಂಬೇಡ್ಕರ್ ಅವರು ಪ್ರಭುದ್ಧ ಭಾರತದ ಪರಿಕಲ್ಪನೆಯೊಂದಿಗೆ ಪ್ರಪಂಚದ ಶ್ರೇಷ್ಠ ಸಂವಿಧಾನವನ್ನು ರಚಿಸಿಕೊಟ್ಟರು.ಇದರ ಅಡಿಯಲ್ಲಿ ನಾವು ಬದುಕುತ್ತಿದ್ದೇವೆ ಎಂದರು.

ಸ್ವಾತಂತ್ರ ನಂತರದಲ್ಲಿ ಆಡಳಿತ ನಡೆಸಿದ ಸರ್ಕಾರದಲ್ಲಿ ವಿವಿಧ ಇಲಾಖಾ ಮಂತ್ರಿಗಳಾಗಿ ಬಾಬು ಜಗಜೀನವರಾಂ ತಮ್ಮದೇ ಆದ ರೀತಿ ದೇಶದ ಏಳಿಗೆಗೆ ಶ್ರಮಿಸಿದರು ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಾಲ್ಲೂಕು ಪಂಚಾಯಿತಿ ಇಓ ದೇವೇಂದ್ರಪ್ಪ ಮಾತನಾಡಿ, ಅಂಬೇಡ್ಕರ್ ಅವರ ಸಾಧನೆ, ಆದರ್ಶ ಮತ್ತು ಸಂವಿಧಾನವನ್ನು ಸದಾ ಮೆಲುಕು ಹಾಕುತ್ತಿರಬೇಕು ಎಂದು ಹೇಳಿದರು.

ಅಂಬೇಡ್ಕರ್ ಅವರ ಕುರಿತು ಭದ್ರಾವತಿ ಆಕಾಶವಾಣಿ ಉದ್ಘೋಷಕ ಎಂ.ಕೆ.ಶಿವಕುಮಾರ್ ಮತ್ತು ಬಾಬು ಜಗಜೀವನ ರಾಂ ಕುರಿತು ದಸಂಸ ಮುಖಂಡ ಎನ್.ವೆಂಕಟೇಶ್ ಉಪನ್ಯಾಸ ನೀಡಿದರು. ಪುರಸಭಾ ಮಾಜಿ ಅಧ್ಯಕ್ಷ ಎಂ. ನರೇಂದ್ರ ಮಾತನಾಡಿದರು.

ಸಭೆಯಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅಧಿಕ ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂಧಿಸಲಾಯಿತು.

ಸಭೆಯಲ್ಲಿ ಡಿವೈಎಸ್ಪಿ ಎಚ್.ಪರಶುರಾಮಪ್ಪ, ಪುರಸಭಾ ಮುಖ್ಯಾಧಿಕಾರಿ ಸಿ.ಎಸ್.ಮಂಜುನಾಥ್, ಸಿಡಿಪಿಒ ಚರಣ್ರಾಜ್, ಪಿಆರ್ಇಡಿ ಎಇಇ ವಿನೋದ್, ಲೋಕೋಪಯೋಗಿ ಇಲಾಖೆ ಎಇಇ ಸೋಮಶೇಖರ್, ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಯತಿರಾಜ್ ಹಾಜರಿದ್ದರು.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಸ್.ಮಂಜುನಾಥ್ ಸ್ವಾಗತಿಸಿದರು.

ಉಪನ್ಯಾಸಕ ಚೇತನ್ ನಿರೂಪಿಸಿದರು. ಎಚ್.ಕೆ.ಶೇಖರಪ್ಪ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-126-510106261

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.