ತರೀಕೆರೆ: ಪಟ್ಟಣದ ವ್ಯಾಪ್ತಿಯ ಅಂಗವಿಕಲರಿಗೆ ಪುರಸಭೆ ವತಿಯಿಂದ ಮಂಗಳವಾರ ಗಾಲಿ ಕುರ್ಚಿಗಳನ್ನು ವಿತರಿಸಲಾಯಿತು.

ಕುರ್ಚಿ ವಿತರಿಸಿ ಮಾತನಾಡಿದ ಪುರಸಭೆ ಅಧ್ಯಕ್ಷ ವಸಂತ ಕುಮಾರ್, ‘ಪುರಸಭೆ ವತಿಯಿಂದ ಬಡವರ ಒಳಿತಿಗಾಗಿ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆರೋಗ್ಯ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.

ಜನರ ತೆರಿಗೆ ಹಣವನ್ನು ಬಡವರಿಗೆ ಸದ್ವಿನಿಯೋಗ ಮಾಡಲು ಪುರಸಭೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಸಾರ್ವಜನಿಕರು ಕಚೇರಿಗೆ ಭೇಟಿ ನೀಡಿ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸದಸ್ಯ ಟಿ. ದಾದಾಪೀರ್ ಹೇಳಿದರು.

ಮುಖ್ಯಾಧಿಕಾರಿ ಮಂಜುನಾಥ, ವ್ಯವಸ್ಥಾಪಕ ಪ್ರಸನ್ನ, ಮುಖಂಡ ಮನ್ಸೂರ್, ಅಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-126-1064245206

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.