ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶುದ್ಧ ನೀರು ಪೂರೈಸಲು ಬದ್ಧ: ಸುರೇಶ್

Last Updated 13 ಆಗಸ್ಟ್ 2022, 2:56 IST
ಅಕ್ಷರ ಗಾತ್ರ

ತರೀಕೆರೆ: ಚಿಕ್ಕಮಗಳೂರು, ಕಡೂರು, ತರೀಕೆರೆ ಮತ್ತು ಅಜ್ಜಂಪುರ ತಾಲ್ಲೂಕಿನ ಗ್ರಾಮಗಳಿಗೆ ಜಲಜೀವನ್ ಮಿಷನ್ ಯೋಜನೆಯಡಿ ಭದ್ರಾ ಜಲಾಶಯದಿಂದ ಶುದ್ಧ ನೀರು ಸೌಲಭ್ಯ ದೊರಕಲಿದೆ ಎಂದು ಶಾಸಕ ಡಿ.ಎಸ್.ಸುರೇಶ್ ಹೇಳಿದರು.

ಅವರು ಭದ್ರಾ ಜಲಾಶಯಕ್ಕೆ ಶುಕ್ರವಾರ ಬಾಗಿನ ಸಮರ್ಪಿಸಿ ಮಾತನಾಡಿದರು. ಅವಧಿಗಿಂತ ಮುಂಚಿತವಾಗಿ ಭದ್ರಾ ಜಲಾಶಯ ತುಂಬಿರುವುದು ರೈತರಲ್ಲಿ ಸಂತಸ ಮೂಡಿಸಿದೆ. ಭದ್ರಾ ಉಪಕಣಿವೆಯಿಂದ ಕ್ಷೇತ್ರದ 56 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.

ಬಿಜೆಪಿ ಜಿಲ್ಲಾ ಘಟಕದ ಕಾರ್ಯದರ್ಶಿ ಪುಣ್ಯಪಾಲ್ ಮಾತನಾಡಿ, 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಪ್ರತೀ ಮನೆಗಳಲ್ಲಿ ರಾಷ್ಟ್ರ ಧ್ವಜ ಹಾರಾಡಬೇಕಿದೆ ಎಂದರು.

ಕೆ.ಆರ್.ಆನಂದಪ್ಪ ಮಾತನಾಡಿ, ಭದ್ರಾ ಜಲಾಶಯದಿಂದ ಸುಮಾರು 8 ತಾಲ್ಲೂಕುಗಳಿಗೆ ಕುಡಿಯುವ ನೀರಿನ ಸೌಕರ್ಯ ದೊರೆತಿದೆ. ಜಲಾಶಯ ಈ ಭಾಗದ ಜೀವನಾಡಿಯಾಗಿದೆ ಎಂದರು.

ತಹಶೀಲ್ದಾರ್ ಪೂರ್ಣಿಮಾ, ತಾಲ್ಲೂಕು ಪಂಚಾಯಿತಿ. ಇಒ ಗೀತಾ, ಅಜ್ಜಂಪುರ ಪುರಸಭೆ ಮುಖ್ಯಾಧಿಕಾರಿ ನಾಗರತ್ನಾ ಮಾತನಾಡಿದರು. ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಟಿ.ಎಲ್.ರಮೇಶ್, ನಿರ್ದೇಶಕ ಗಿರೀಶ್‍ ಚಾವ್ಹಾಣ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಪದ್ಮಾವತಿ ಸಂಜೀವ್‍ಕುಮಾರ್, ಟಿಎಪಿಸಿಎಂಎಸ್ ಅಧ್ಯಕ್ಷ ಎಸ್.ಬಿ.ಆನಂದಪ್ಪ, ಮಾಜಿ ಅಧ್ಯಕ್ಷ ಗುಳ್ಳದಮನೆ ವಸಂತಕುಮಾರ್, ಲಕ್ಕವಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕುಪ್ಪನ್, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ರಾಜೇಶ್ವರಿ, ಪುರಸಭೆ ಸದಸ್ಯರಾದ ಆಶಾ, ಶಿವಮೂರ್ತಿ, ಪವಿತ್ರಾ, ಶ್ರೇಯಸ್, ಮುಖಂಡರಾದ ಡಿ.ಎಸ್.ಗಿರೀಶ್, ರಮೇಶ್, ಶಿವಯೋಗಿ, ಸಂಕೇತ್, ಅಶ್ವತ್ಥ್‌ ರೆಡ್ಡಿ, ಸುಧಾಕರ್, ಜಯಣ್ಣ, ವಿನಾಯಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT