ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ ಸ್ವಸಹಾಯ ಸಂಘಗಳು ಕೈಜೋಡಿಸಲಿ: ಸುರೇಶ್

ತರೀಕೆರೆ: ಸ್ವಸಹಾಯ ಸಂಘಗಳು ಅಡಿಕೆ ತಟ್ಟೆಗಳು, ಬಿದಿರು, ಪೇಪರ್‌ನಿಂದ ಹೆಚ್ಚು ಹೆಚ್ಚು ಉತ್ಪನ್ನಗಳನ್ನು ತಯಾರಿಸಿ, ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ ಕೈಜೋಡಿಸಬೇಕು ಎಂದು ಶಾಸಕ ಡಿ.ಎಸ್ .ಸುರೇಶ್ ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಸೋಮವಾರ ನಡೆದ ಮಹಿಳಾ ಉದ್ಯಮಶೀಲತಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಸರ್ಕಾರ ಸ್ತ್ರೀಶಕ್ತಿ ಸಂಘಗಳಿಗೆ ₹ 1 ಲಕ್ಷ ಸಹಾಯಧನ ನೀಡಿದೆ. ಡಿಸಿಸಿ ಬ್ಯಾಂಕ್‌ನಿಂದ ಶೇ 3 ಬಡ್ಡಿದರಲ್ಲಿ ₹ 2 ಲಕ್ಷದವರೆಗೆ ಸಾಲ ನೀಡುತ್ತಿದ್ದು, ಸ್ವಸಹಾಯ ಸಂಘಗಳು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ಅವರು ಹೇಳಿದರು.
ಗ್ರಾಮ ಪಂಚಾಯಿತಿಯಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ ನೀಡಲಾಗಿದೆ. ಎಲ್ಲಾ ರಂಗದಲ್ಲಿ ಮಹಿಳೆಯರು ಪ್ರತಿಭೆ ತೋರಿಸಿ ಮುಂದೆ ಬರಬೇಕು ಎಂದು ತಿಳಿಸಿದರು.
ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ದಾದಾಪೀರ್, ತಹಶೀಲ್ದಾರ್ ಪೂರ್ಣಿಮಾ, ತೋಟಗಾರಿಕೆ ಸಹಾಯಕ ನಿರ್ದೇಶಕ ಯತಿರಾಜ್, ಸಿಡಿಪಿಒ ಜ್ಯೋತಿಲಕ್ಷ್ಮಿ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಆನಂದಪ್ಪ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.