ತರೀಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲ್ಲೂಕಿನ ಕುಡ್ಲೂರು ಗ್ರಾಮದ ಮಹೇಶ್ವರ ಪ್ರೌಢಶಾಲೆಯಲ್ಲಿ ಅಂತರರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ನಡೆಯಿತು.

ಯೂನಿಯನ್ ಬ್ಯಾಂಕ್ ಆರ್ಥಿಕ ಸಾಕ್ಷರತಾ ಅಧಿಕಾರಿ ಜಯಣ್ಣ ಮಾತನಾಡಿ, ಮಾದಕ ದ್ರವ್ಯ ಸೇವನೆ ಆರೋಗ್ಯಕ್ಕೆ ಹಾನಿಕರವಾಗಿದೆ. ಧೂಮಪಾನ ಮತ್ತು ಹೊಗೆ ರಹಿತ ತಂಬಾಕು ಉತ್ಪನ್ನಗಳು ಸೇರಿದಂತೆ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ಆರೋಗ್ಯದ ಅಪಾಯಗಳ ಬಗ್ಗೆ ಮಕ್ಕಳು ಮತ್ತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯ ಕೆ.ಬಿ. ಮಲ್ಲಪ್ಪ, ಯುವಜನರು, ವಿದ್ಯಾರ್ಥಿ ಸಮುದಾಯ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿಕೊಳ್ಳುತ್ತಿರುವುದು ಆತಂಕಕಾರಿಯಾಗಿದೆ ಎಂದರು.

ತಾಲ್ಲೂಕು ಯೋಜನಾಧಿಕಾರಿ ಕುಸುಮಾಧರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಶಿಕ್ಷಕ ರಾಜ ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಲಯ ಮೇಲ್ವಿಚಾರಕ ಮಂಜುನಾಥ್, ಒಕ್ಕೂಟದ ಅಧ್ಯಕ್ಷೆ ಪುಷ್ಪಾ, ಕವಿತಾ, ವೀಣಾ, ಪದ್ಮಾ, ಸೇವಾ ಪ್ರತಿನಿಧಿ ಸುರೇಖಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.