ತರೀಕೆರೆ: ಪೌತಿ ಖಾತೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಅರೋಪದಲ್ಲಿ ಕಂದಾಯ ಅಧಿಕಾರಿ(ಆರ್ಐ) ಮತ್ತು ಗ್ರಾಮ ಆಡಳಿತಾಧಿಕಾರಿಯನ್ನು ಲೋಕಾ ಯುಕ್ತ ಪೊಲೀಸರು ಬಂಧಿಸಿದ್ದಾರೆ.

ಅಮೃತಾಪುರ ಹೋಬಳಿ ಕಂದಾಯ ಅಧಿಕಾರಿ ಎಸ್.ಕೆ. ರಮೇಶ್ ಮತ್ತು ಹುಣಸಘಟ್ಟ ವೃತ್ತದ ಗ್ರಾಮ ಆಡಳಿತಾಧಿಕಾರಿ ಸಂತೋಷ್ ನಾಯ್ಕ ಲೋಕಾಯುಕ್ತರ ಬಲೆಗೆ ಬಿದ್ದಿರುವ ನೌಕರರು.

ಕುಮಾರಸ್ವಾಮಿ ಎಂಬುವರು ತನ್ನ ಅಜ್ಜಿಯ ಹೆಸರಿನಲ್ಲಿದ್ದ 17 ಗುಂಟೆ ಜಮೀನನ್ನು ಪೌತಿ ಖಾತೆ ಮಾಡಿಸಲು ಅರ್ಜಿ ಸಲ್ಲಿಸಿದ್ದರು. ಇದಕ್ಕೆ ₹30 ಸಾವಿರ ಲಂಚ ಕೊಡಬೇಕು ಎಂದು ಬೇಡಿಕೆ ಇಡಲಾಗಿತ್ತು ಎನ್ನಲಾಗಿದೆ.

ಕುಮಾರಸ್ವಾಮಿ ನೀಡಿದ ದೂರು ಆಧರಿಸಿ ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿದರು. ಹಣದ ಸಮೇತ ನೌಕರರನ್ನು ವಶಕ್ಕೆ ಪಡೆದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-126-1713403083

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.