ತರೀಕೆರೆ: ರಾಷ್ಟ್ರೀಯ ಜನಗಣತಿ–2027ರ ಮೊದಲ ಹಂತದ ಮನೆ ಗಣತಿ ಕಾರ್ಯವನ್ನು ತರೀಕೆರೆ ತಾಲ್ಲೂಕು ಕಡಿಮೆ ಅವಧಿಯಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿ, ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದಿದೆ ಎಂದು ತಹಶೀಲ್ದಾರ್ ರಶ್ಮಿ ಎಚ್.ಜೆ. ತಿಳಿಸಿದ್ದಾರೆ.

ಪತ್ರಿಕೆಯೊಂದಿಗೆ ಮಾತನಾಡಿದ ಅವರು, ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಒಟ್ಟು 278 ಎಚ್.ಎಲ್.ಬಿ. ಬ್ಲಾಕ್ಗಳಿದ್ದು, 198 ಗಣತಿದಾರರು, 32 ಮೇಲ್ವಿಚಾರಕರು ಹಾಗೂ ನಾಲ್ವರು ತಾಲ್ಲೂಕು ತರಬೇತುದಾರರು ಮನೆ ಗಣತಿ ಕಾರ್ಯದಲ್ಲಿ ಭಾಗವಹಿಸಿದ್ದರು ಎಂದು ತಿಳಿಸಿದರು.

ಗಣತಿಯ ಪ್ರಕಾರ ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಅಂದಾಜು 37,253 ಕುಟುಂಬಗಳಿದ್ದು, 1,07,538 ಜನಸಂಖ್ಯೆ ಇರಬಹುದೆಂದು ಅಂದಾಜಿಸಲಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ ಅವರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸಿದ ನಾಲ್ವರು ತರಬೇತುದಾರರಲ್ಲಿ ಚೇತನ್ ಗೌಡ ಹಾಗೂ ಶೇಖರಪ್ಪ ಅವರ ಸೇವೆ ವಿಶೇಷವಾಗಿತ್ತು. ಜೊತೆಗೆ ವಿವಿಧ ಅಧಿಕಾರಿಗಳ ಪ್ರತ್ಯಕ್ಷ ಹಾಗೂ ಪರೋಕ್ಷ ಸಹಕಾರದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ಹೇಳಿದರು.

ಈ ಕಾರ್ಯದಲ್ಲಿ ತೊಡಗಿಸಿ ಕೊಂಡ ಸಿಬ್ಬಂದಿ ಮತ್ತು ಅಧಿಕಾರಿಗಳ ಕ್ರಮವನ್ನು ಅವರು ಶ್ಲಾಘಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-126-1984333081

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.