ಹಾದೀಕೆರೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ, ಕಲೋತ್ಸವ

ತರೀಕೆರೆ: ಹಾದೀಕೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ ವಲಯ ಮಟ್ಟದ ಪ್ರೌಢಶಾಲಾ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೌರಮ್ಮ ಮಂಜಪ್ಪ ಉದ್ಘಾಟಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಹೋನ್ನೇಶ ಕುಮಾರ್ ಮಾತನಾಡಿ, ಪ್ರತಿಭಾ ಕಾರಂಜಿ ಕೇವಲ ಮನರಂಜನೆಗೆ ಸೀಮಿತವಾದ ಕಾರ್ಯಕ್ರಮವಾಗಿರದೆ, ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಪ್ರತಿಬಿಂಬಿಸುವ ಕಾರ್ಯಕ್ರಮವಾಗಬೇಕು’ ಎಂದರು.
ಶಿಕ್ಷಣ ಸಮನ್ವಯಾಧಿಕಾರಿ ಶ್ರೀನಿವಾಸ್ ಮಾತನಾಡಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್. ಎಸ್.ರಾಜಪ್ಪ ಮಾತನಾಡಿದರು. ಎಸ್‌ಡಿಎಂಸಿ ಅಧ್ಯಕ್ಷ ಕಿರಣ್ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಗ್ರಾಮ ಪಂಚಾಯಿತಿ ಸದಸ್ಯ ಎನ್. ಎಸ್.ವಸಂತಕುಮಾರ್, ರೇಖಮ್ಮ, ಸಾಹಿತಿ ಮಲ್ಲಯ್ಯ, ಪ್ರೌಢಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಗುರುಮೂರ್ತಿ, ನೋಡಲ್ ಅಧಿಕಾರಿ ನಟರಾಜ್, ಶಿಕ್ಷಕರಾದ ಕಾಂತರಾಜ್, ಮಹಂತೇಶ್, ಸಿದ್ದರಾಮಪ್ಪ, ಕುಮಾರಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯರಾದ ಅರುಣ್ ಕುಮಾರ್, ಅಂಬಿತಾ, ರತ್ನಮ್ಮ, ಮುಖಂಡರಾದ ಡಿ.ಸಿ.ದಿನೇಶ್, ಮಹೇಶ್ವರಪ್ಪ, ಹರೀಶ್, ಚಂದ್ರಮೌಳಿ, ಲತಾ ಇದ್ದರು. ಮುಖ್ಯ ಶಿಕ್ಷಕ ಉಮೇಶ್ ಸ್ವಾಗತಿಸಿದರು. ಶಿಕ್ಷಕಿ ಜ್ಯೋತಿ ವಂದಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.