ತರೀಕೆರೆ: ‘ನಾನು ನಿರಂತರವಾಗಿ ಜನಪರ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದೇನೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷನಾಗಿ ಪಾರದರ್ಶಕವಾಗಿ ಕಾರ್ಯನಿರ್ವಹಣೆ ಮಾಡಿದ್ದೇನೆ’ ಎಂದು ಕಾಂಗ್ರೆಸ್ ಮುಖಂಡ ಜಯಪ್ರಕಾಶ್ ಹೆಗ್ಡೆ ಹೇಳಿದರು.

ಪಟ್ಟಣದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿನಿತ್ಯ ಜನರು ಯಾವುದಾದರೂ ಕೆಲಸಕ್ಕೆ, ಸಮಸ್ಯೆ ನಿವಾರಣೆಗೆ ಕರೆ ಮಾಡುತ್ತಾರೆ. ಅಂಥ ಕೆಲಸಗಳನ್ನು ಮುತುವರ್ಜಿಯಿಂದ ನಿಭಾಯಿಸುತ್ತಿದ್ದೇನೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರು 8 ವರ್ಷ ಮುಖ್ಯಮಂತ್ರಿಯಾಗಿ, 2 ಬಾರಿ ವಿರೋಧ ಪಕ್ಷದ ನಾಯಕರಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದಾರೆ. ರಾಜಕೀಯದಲ್ಲಿ ಬದಲಾವಣೆಗಳು ಸಹಜವಾಗಿ ನಡೆಯುತ್ತವೆ. ಮುಖ್ಯಮಂತ್ರಿ ಸ್ಥಾನದ ಬದಲಾವಣೆ ಯಾವುದೇ ಗೊಂದಲವಿಲ್ಲದೆ ಸರಾಗವಾಗಿ ನಡೆದಿದೆ. ಯಾರಿಗೂ ನೋವಾಗದಂತೆ, ಸಿದ್ದರಾಮಯ್ಯ ಅವರ ಗೌರವ ಹೆಚ್ಚಾಗುವಂತೆ ನಡೆದುಕೊಳ್ಳಲಾಗಿದೆ ಎಂದರು.

ಜೂನ್ 3ರಂದು ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಮಂತ್ರಿ ಸ್ಥಾನ ಸಿಗಲಿ ಎಂದರು.

ತರೀಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಯು.ಫಾರೂಕ್, ಜಯಪ್ರಕಾಶ್ಹೆಗ್ಡೆ ಸರಳ ವ್ಯಕ್ತಿತ್ವದ ರಾಜಕಾರಣಿ. ರಾಜಕಾರಣದಲ್ಲಿ ಅನುಭವ ಹೊಂದಿದ್ದಾರೆ. ಪಕ್ಷದ ಹೈಕಮಾಂಡ್ ಜಯಪ್ರಕಾಶ್ಹೆಗ್ಡೆ ಅವರಿಗೆ ರಾಜ್ಯಸಭಾ ಸದಸ್ಯ ಸ್ಥಾನ ನೀಡಬೇಕು ಎಂದರು.

ಪುರಸಭೆ ಮಾಜಿ ಅಧ್ಯಕ್ಷ ಟಿ.ಎಸ್. ಧರ್ಮರಾಜ್, ಕಾಂಗ್ರೆಸ್ ನಗರಾಧ್ಯಕ್ಷ ಪ್ರಕಾಶ್ ವರ್ಮ, ಕಾಂಗ್ರೆಸ್ ಕಿಸಾನ್ ಕೋಶದ ಅಧ್ಯಕ್ಷ ಗಿರೀಶ್, ಪುರಸಭೆ ಸದಸ್ಯ ಟಿ.ಜಿ.ಮಂಜುನಾಥ್, ಮಾಜಿ ಸದಸ್ಯ ಕೃಷ್ಣ, ರಾಜು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-126-657688303

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.