ತರೀಕೆರೆ: ಅಮೃತಾಪುರ ಹೋಬಳಿಯ ಹಾದೀಕೆರೆ ಗ್ರಾಮದ ಸರ್ವೆ ನಂ. 187ರ ಜಮೀನಿನಲ್ಲಿ ಉಳುಮೆ ಮಾಡಿಕೊಂಡಿರುವ ರೈತರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿ, ದಲಿತ ಸಂಘರ್ಷ ಸಮಿತಿಯಿಂದ ಗ್ರಾಮದಲ್ಲಿ ಪ್ರತಿಭಟನೆ ನಡೆಸಲಾಯಿತು.

ಸ್ಥಳಕ್ಕೆ ಬಂದ ತಹಶೀಲ್ದಾರ್ ಎಚ್.ಜೆ. ರಶ್ಮಿ ಅವರು, ‘ವಾರದಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆಯಿಂದ ಜಂಟಿ ಸರ್ವೆ ಮಾಡಿಸಿ, ರೈತರ ಸಮಸ್ಯೆಯನ್ನು ಪರಿಹರಿಸಲಾಗುವುದು’ ಎಂದರು.

ಸಮಿತಿಯ ತಾಲ್ಲೂಕು ಸಂಚಾಲಕ ವಸಂತಕುಮಾರ್ ಮಾತನಾಡಿ, ‘ಜೀವನಕ್ಕೆ ಆಧಾರವಾಗಿರುವ ಭೂಮಿ ಕಿತ್ತುಕೊಂಡರೆ ಜೀವನ ನಿರ್ವಹಣೆ ಕಷ್ಟ. ತಹಶೀಲ್ದಾರ್ ಅವರ ಭರವಸೆಯಂತೆ ತಾತ್ಕಾಲಿಕವಾಗಿ ಪ್ರತಿಭಟನೆ ಹಿಂಪಡೆಯಲಾಗಿದೆ. ಶೀಘ್ರದಲ್ಲೇ ಸಮಸ್ಯೆ ಬಗೆಹರಿಯದಿದ್ದರೆ ಮುಂದಿನ ದಿನಗಳಲ್ಲಿ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಶಿವಲಿಂಗಪ್ಪ, ತಾಲ್ಲೂಕು ಸಂಘಟನಾ ಸಂಚಾಲಕ ಮಂಜುನಾಥ್, ರೈತ ಮುಖಂಡ ಕೃಷ್ಣಪ್ಪ, ಹಾಗೂ ರೈತ ಕುಟುಂಬದವರು ಪ್ರತಿಭಟನೆಯಲ್ಲಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-126-1676530408

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.