ತರೀಕೆರೆ: ‘ಶಾಸಕ ಜಿ.ಎಚ್. ಶ್ರೀನಿವಾಸ್ ಅವರ ಸೂಚನೆಯಂತೆ ಕೆಮ್ಮಣ್ಣಗುಂಡಿ ಮತ್ತು ಕಲ್ಶೆಡ್ ಗ್ರಾಮಗಳ ನಿರಾಶ್ರಿತ ಫಲಾನುಭವಿಗಳಿಗೆ ಲಿಂಗದಹಳ್ಳಿ ಬಳಿಯ ಸಹ್ಯಾದ್ರಿಪುರ ಮತ್ತು ಕಲ್ಶೆಡ್ ಗ್ರಾಮಗಳಲ್ಲಿ ನಿವೇಶನ ನೀಡಲು ಅಗತ್ಯ ಕ್ರಮ ಕೈಗೊಳ್ಳುವ ಸಲುವಾಗಿ ತಾಲ್ಲೂಕು ಮತ್ತು ಹೋಬಳಿ ಮಟ್ಟದ ಕಂದಾಯ ಮತ್ತು ಪಂಚಾಯಿತಿ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಕಂದಾಯ ಉಪವಿಭಾಗಾಧಿಕಾರಿ ಎನ್.ವಿ. ನಟೇಶ್ ತಿಳಿಸಿದರು.

ಸಂಬಂಧಪಟ್ಟ ಕಂದಾಯ ಇಲಾಖಾಧಿಕಾರಿಗಳೊಂದಿಗೆ ಇತ್ತೀಚೆಗೆ ಸ್ಥಳ ಪರಿಶೀಲನೆ ನಡೆಸಿದ ಉಪವಿಭಾಗಾಧಿಕಾರಿಗಳು, ನಿವೇಶನ ರಹಿತರಿಗೆ ನಿವೇಶನಗಳನ್ನು ಹಂಚುವ ಮೊದಲು ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ನಂತರ ಅರ್ಹತೆಯ ಮೇರೆಗೆ ನಿವೇಶನಗಳ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.

ತರೀಕೆರೆ ತಾಲ್ಲೂಕು ಪಂಚಾ ಯಿತಿ ಕಾರ್ಯ ನಿರ್ವಹಣಾಧಿಕಾರಿ ದೇವೇಂದ್ರಪ್ಪ, ತಿಗಡ ಗ್ರಾಮ ಪಂಚಾ ಯಿತಿ ಪಿ.ಡಿ.ಒ ಶಿವಮೂರ್ತಿ ಟಿ., ಲಿಂಗದ ಹಳ್ಳಿ ಗ್ರಾಮ ಪಂಚಾಯಿತಿ ಪಿ.ಡಿ.ಒ ಎನ್.ಎಸ್. ನಾಗರಾಜಪ್ಪ, ಸಿಬ್ಬಂದಿ ವರ್ಗ ಮತ್ತು ಕಂದಾಯ ಇಲಾಖಾ ಅಧಿಕಾರಿಗಳು ಹಾಜರಿದ್ದು ಉಪವಿಭಾಗಾಧಿಕಾರಿಗಳಿಗೆ ಕೆಮ್ಮಣ್ಣಗುಂಡಿ ಹಾಗೂ ಕಲ್ಶೆಡ್ ಗ್ರಾಮಗಳ ನಿರಾಶ್ರಿತರುಗಳ ವಿವರಗಳನ್ನು ಒದಗಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-126-1411829138

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.