ತರೀಕೆರೆ: ‘ಕಾಯಕವೇ ಕೈಲಾಸ ಎಂಬ ತತ್ವದಡಿ ರಾಷ್ಟ್ರದ ಅಭಿವೃದ್ಧಿಗೆ ಬೆನ್ನೆಲುಬಾಗಿ ನಿಂತಿರುವ ಕಾರ್ಮಿಕರ ಶ್ರಮ ಶ್ರೇಷ್ಠವಾದುದು’ ಎಂದು ಬೇಲೇನಹಳ್ಳಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಘುವೀರ್ ಹೇಳಿದರು.

ತಾಲ್ಲೂಕಿನ ಬೇಲೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೀರಾವರಿ ಕಾಲುವೆ ಅಭಿವೃದ್ಧಿ ಕಾಮಗಾರಿ ಸ್ಥಳದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೂಲಿ ಕಾರ್ಮಿಕೆ ಲಲಿತಮ್ಮ ಮಾತನಾಡಿ, ನರೇಗಾ ಯೋಜನೆಯು ನಮ್ಮಂತಹ ಬಡ ಕುಟುಂಬಗಳಿಗೆ ಆಸರೆಯಾಗಿದೆ. ನಾವು ಕೆಲಸ ಮಾಡುವ ಸ್ಥಳಕ್ಕೆ ಅಧಿಕಾರಿಗಳು ಬಂದು ನಮ್ಮೊಂದಿಗೆ ಕಾರ್ಮಿಕ ದಿನ ಆಚರಿಸಿ ಗೌರವ ನೀಡಿದ್ದು ತುಂಬಾ ಖುಷಿ ತಂದಿದೆ. ಬಿಸಿಲಿದ್ದರೂ ನಮ್ಮ ಹಳ್ಳಿಯ ಕಾಲುವೆ ಅಭಿವೃದ್ಧಿ ಮಾಡುತ್ತಿದ್ದೇವೆ ಎಂಬ ಹೆಮ್ಮೆ ನಮಗಿದೆ ಎಂದು ಹೇಳಿದರು.

ಗ್ರಾಮದ ನೀರಾವರಿ ಕಾಲುವೆ ಹೂಳೆತ್ತುವ ಕಾಯಕದಲ್ಲಿ ಮಗ್ನರಾಗಿದ್ದ ಕೂಲಿಕಾರರು ತಮ್ಮ ಕೆಲಸದ ನಡುವೆಯೇ ಕೇಕ್ ಕತ್ತರಿಸಿ ಕಾರ್ಮಿಕ ದಿನವನ್ನು ಸಂಭ್ರಮದಿಂದ ಆಚರಿಸಿದರು.

ತಾಲ್ಲೂಕು ಮಾಹಿತಿ ಶಿಕ್ಷಣ ಮತ್ತು ಸಂವಹನ ಸಂಯೋಜಕ ನಥಾನಿಯಲ್ ಅಮನ್ನಾ ಮಾತನಾಡಿ, ನರೇಗಾ ಯೋಜನೆಯಡಿ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳು, ಕೆಲಸದ ಸ್ಥಳದಲ್ಲಿ ಇರಬೇಕಾದ ಸುರಕ್ಷತಾ ಕ್ರಮಗಳು, ಸಕಾಲಕ್ಕೆ ವೇತನ ಪಡೆಯುವ ಹಕ್ಕಿನ ಬಗ್ಗೆ ಪ್ರತಿಯೊಬ್ಬರಿಗೂ ಅರಿವಿರಬೇಕು. ಕಾರ್ಮಿಕರು ಕೂಲಿ ಪಡೆಯುವುದಷ್ಟೇ ಅಲ್ಲದೆ ಸರ್ಕಾರದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪ್ರಯೋಜನ ಪಡೆಯಬೇಕು ಎಂದರು.

ತಾಂತ್ರಿಕ ಸಹಾಯಕ ವಿವೇಕ್, ಗ್ರಾಮ ಕಾಯಕ ಮಿತ್ರ ಸೌಮ್ಯಾ, ಬಿ.ಎಫ್.ಟಿ. ಹನುಮಂತಪ್ಪ, ತಾಂಡಾ ರೋಜ್ಗಾರ್ ಮಿತ್ರ ಪುಷ್ಪ, ಪಂಚಾಯಿತಿ ಸಿಬ್ಬಂದಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-126-1406601544

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.