ತರೀಕೆರೆ: ತರೀಕೆರೆ ವಕೀಲರ ಸಂಘದ ಕಚೇರಿಯಲ್ಲಿ ಮಂಗಳವಾರ ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನವನ್ನು ಆಚರಿಸಲಾಯಿತು.

ವಕೀಲ ಕೆ. ಲಿಂಗರಾಜು ಮಾತನಾಡಿ, ಅಂಬೇಡ್ಕರ್ ಅವರು ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದರು. ಎಲ್ಲಾ ವರ್ಗದ ಜನರು ವಿದ್ಯಾವಂತರಾಗಲು ಶ್ರಮಿಸಿದರು. ಅವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳಿದರು.

ವಕೀಲ ಟಿ.ಆರ್. ಕೃಷ್ಣಮೂರ್ತಿ ಮಾತನಾಡಿ, ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನದಿಂದ ಎಲ್ಲರಿಗೂ ಪ್ರಾತಿನಿಧ್ಯ ದೊರೆಯುವಂತೆ ಮಾಡಿದ ಮಹಾನ್ ವ್ಯಕ್ತಿ ಎಂದರು.

ವಕೀಲ ಕೆ.ಚಂದ್ರಪ್ಪ ಮಾತನಾಡಿ ದೇಶ, ವಿದೇಶಗಳಲ್ಲಿ ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಅಂಬೇಡ್ಕರ್ ಕೇವಲ ದಲಿತರಿಗೆ ಮಾತ್ರವಲ್ಲದೆ ಎಲ್ಲಾ ವರ್ಗದವರಿಗೂ ನ್ಯಾಯ ದೊರಕಿಸಿದ್ದಾರೆ ಎಂದರು.

ಅಧ್ಯಕ್ಷ ಶಿವಶಂಕರನಾಯ್ಕ, ಉಪಾಧ್ಯಕ್ಷ ಎಸ್.ರಜನೀಶ್, ಕಾರ್ಯದರ್ಶಿ ಎ.ನವೀನ್, ವಕೀಲರಾದ ತೇಜಮೂರ್ತಿ, ಎಸ್.ಸುರೇಶ್ಚಂದ್ರ, ಬಿ.ಟಿ.ಕೆಂಚಪ್ಪ, ಟಿ.ಡಿ. ಆನಂದ್, ವಸಂತ ಹಾಜರಿದ್ದರು. ಸಂಘಟನಾ ಕಾರ್ಯದರ್ಶಿ ಅಮರನಾಥ್ ನಿರೂಪಿಸಿದರು. ವಕೀಲೆ ವೀಣಾ ಪ್ರಾರ್ಥಿಸಿದರು. ಶಿಕ್ಷಕ ಬಸವರಾಜ್ ನಾಯ್ಕ ಉಪನ್ಯಾಸ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-126-1525517652

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.