ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕ ಇಳುವರಿಗೆ ಬದು ಸಹಕಾರಿ: ಶಾಸಕ ಡಿ.ಎಸ್.ಸುರೇಶ್

ಬದು ನಿರ್ಮಾಣ ಕಾಮಗಾರಿ ಮಾಸಾಚರಣೆ
Last Updated 19 ಮೇ 2020, 11:08 IST
ಅಕ್ಷರ ಗಾತ್ರ

ತರೀಕೆರೆ: ‘ಮಣ್ಣಿನ ಸವಕಳಿ ಹಾಗೂ ತೇವಾಂಶದ ಕೊರತೆಯನ್ನು ಎದುರಿಸುತ್ತಿರುವ ತಾಲ್ಲೂಕಿನ ರೈತರ ಜಮೀನುಗಳಲ್ಲಿ ಸರ್ಕಾರದ ಅನುದಾನದಿಂದ ಬದು ನಿರ್ಮಿಸಲು ಅವಕಾಶವಿದ್ದು, ರೈತರು ಸಾಮೂಹಿಕವಾಗಿ ಈ ಅವಕಾಶವನ್ನು ಬಳಸಿಕೊಳ್ಳಬೇಕು’ ಎಂದು ಶಾಸಕ ಡಿ.ಎಸ್.ಸುರೇಶ್ ಹೇಳಿದರು.

ತಾಲ್ಲೂಕಿನ ವಿಠಲಾಪುರ ಗ್ರಾಮದ ರೈತರ ಜಮೀನಿನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ‘ಬದು ನಿರ್ಮಾಣ ಯೋಜನೆಯ ಮಾಸಾಚರಣೆ’ ಕಾರ್ಯಕ್ರಮದಲ್ಲಿ ಅವರ ಮಾತನಾಡಿ, ‘ತಿರುವು ಗಾಲುವೆ, ಕೃಷಿ ಹೊಂಡ, ಚೆಕ್ ಡ್ಯಾಂ ಗಳನ್ನು ₹ 6.94 ಲಕ್ಷ ವೆಚ್ಚದಲ್ಲಿ ಮಾಡಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

‘ಸಣ್ಣ ರೈತರ ಜಮೀನುಗಳಿಗೆ ಬದು ನಿರ್ಮಾಣವು ಅವಶ‍್ಯಕವಾಗಿದೆ. ಇದರಿಂದಾಗಿ ಶೇ 15ರಷ್ಟು ಇಳುವರಿ ಹೆಚ್ಚಿಸಿಕೊಳ್ಳಬಹುದಾಗಿದೆ. ಒಂದು ಎಕರೆ ಪ್ರದೇಶದಲ್ಲಿ 100 ಮೀ. ಬದು ನಿರ್ಮಾಣದಿಂದ ಪ್ರತಿ ಎಕರೆಗೆ ಗರಿಷ್ಠ 2ಲಕ್ಷ ಲೀ. ಮಳೆ ನೀರು ಸಂಗ್ರಹವಾಗುತ್ತದೆ. ಸಣ್ಣ ರೈತರು ಇದರ ಪ್ರಯೋಜನವನ್ನು ಪಡೆಯಬಹುದಾಗಿದೆ. ಅಮೃತಾಪುರ, ಹಾದಿಕೆರೆ, ನೇರಲಕೆರೆ, ಹುಣಸಘಟ್ಟ ಗ್ರಾಮಗಳಲ್ಲಿ ಈಗಾಗಲೇ ಕಾಮಗಾರಿ ನಡೆಯುತ್ತಿದೆ’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಆರ್.ಆನಂದಪ್ಪ ಮಾತನಾಡಿ, ‘ರೈತರು ಬದುಗಳ ಮೇಲೆ ಹುಲ್ಲು, ತೋಟಗಾರಿಕೆ ಹಾಗೂ ಅರಣ ಸಸಿಗಳನ್ನು ನಾಟಿ ಮಾಡುವ ಮೂಲಕ ಆದಾಯವನ್ನು ಹೆಚ್ಚಿಸಿಕೊಳ್ಳಬಹುದಾಗಿದೆ’ ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಪದ್ಮಾವತಿ, ಸದಸ್ಯ ಹಾಲಾನಾಯ್ಕ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಾವಿತ್ರಮ್ಮ, ಸದಸ್ಯರಾದ ಸುಧಾಕರ್, ಓಂಕಾರಪ್ಪ, ಇಒ ವಿಶಾಲಾಕ್ಷಮ್ಮ, ಕೃಷಿ ಸಹಾಯಕ ನಿರ್ದೆಶಕ ಟಿ.ಚಿತ್ರಸೇನ, ಕೃಷಿ ಅಧಿಕಾರಿ ಕರಿಯಪ್ಪ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT