ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ಪುರಸಭೆ ಸದಸ್ಯರ ಆಯ್ಕೆಗೆ ಮತದಾನ ಆರಂಭವಾಗಿದೆ.
ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಮತದಾರರು ಮತಗಟ್ಟೆಗಳ ಬಳಿ ಸಾಲುಗಟ್ಟಿ ನಿಂತಿದ್ದಾರೆ. 27 ಮತಗಟ್ಟೆ ಸ್ಥಾಪಿಸಲಾಗಿದೆ. ಐದು ಸೂಕ್ಷ್ಮ ಮತಗಟ್ಟೆಗಳು ಇವೆ.
ಒಟ್ಟು 23 ವಾರ್ಡ್ ಗಳಿದ್ದು, ಈ ಪೈಕಿ ಒಂದು ವಾರ್ಡ್ ನಲ್ಲಿ (10) ಅವಿರೋಧವಾಗಿ ಆಯ್ಕೆ ನಡೆದಿದೆ. ಬಾಕಿ 22 ವಾರ್ಡ್ ಗಳಿಗೆ ಸದಸ್ಯರ
ಆಯ್ಕೆಗೆ ಮತದಾನ ನಡೆಯುತ್ತಿದೆ. 78 ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ. ಒಟ್ಟು 28073 ಮತದಾರರು ಇದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.