ತರೀಕೆರೆ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ತರೀಕೆರೆ ಯುವ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಎಂ.ಜಿ. ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಯೂಥ್ ಕಾಂಗ್ರೆಸ್ ಅಧ್ಯಕ್ಷ ಧವನ್ ರಾಜ್, ‘ರಾಜಸ್ಥಾನ ಮತ್ತು ಉತ್ತರಾಖಂಡದಲ್ಲಿ ಮೇ 3ರಂದು ನಡೆದ ನೀಟ್–ಯುಜಿ 2026 ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದಿದೆ. ಪರೀಕ್ಷಾ ಪ್ರಕ್ರಿಯೆಯ ಪಾರದರ್ಶಕತೆ ಕಾಪಾಡುವಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ’ ಎಂದು ಆರೋಪಿಸಿದರು.

ತರೀಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಯು. ಫಾರೂಕ್, ‘ಗ್ರಾಮೀಣ, ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣಕ್ಕಾಗಿ ವರ್ಷಗಟ್ಟಲೆ ಪರಿಶ್ರಮಪಡುತ್ತಾರೆ. ಪ್ರಶ್ನೆಪತ್ರಿಕೆ ಸೋರಿಕೆಯಿಂದ ವಿದ್ಯಾರ್ಥಿಗಳ ಭವಿಷ್ಯ ಹಾಗೂ ಪೋಷಕರ ವಿಶ್ವಾಸಕ್ಕೆ ಧಕ್ಕೆಯುಂಟಾಗಿದೆ’ ಎಂದು ದೂರಿದರು.

ಶಾಸಕ ಜಿ.ಎಚ್. ಶ್ರೀನಿವಾಸ್, ‘ದೇಶದಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶದಲ್ಲಿ ಪಾರದರ್ಶಕತೆ ಮತ್ತು ಮೆರಿಟ್ ಆಧಾರಿತ ಅವಕಾಶ ಕಲ್ಪಿಸುವ ಉದ್ದೇಶದಿಂದ ಯುಪಿಎ ಸರ್ಕಾರದ ಅವಧಿಯಲ್ಲಿ 2012ರಲ್ಲಿ ನೀಟ್ ವ್ಯವಸ್ಥೆ ಜಾರಿಗೆ ತರಲಾಗಿತ್ತು. ಆದರೆ, ಈಗ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳು, ಕೋಚಿಂಗ್ ಮಾಫಿಯಾ ಮತ್ತು ಪರೀಕ್ಷಾ ಅಕ್ರಮಗಳಿಂದ ಅದರ ಮೂಲ ಉದ್ದೇಶಕ್ಕೆ ಧಕ್ಕೆಯಾಗಿದೆ’ ಎಂದು ಆರೋಪಿಸಿದರು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಜಿತ್ ಗೌಡ, ‘2024ರಲ್ಲಿಯೂ ನೀಟ್ಗೆ ಸಂಬಂಧಿಸಿದ ಪ್ರಶ್ನೆಪತ್ರಿಕೆ ವಿವಾದಗಳು ಕೇಳಿಬಂದಿದ್ದವು. ಈ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಸಂಪೂರ್ಣ ವಿಶ್ವಾಸ ಮೂಡಿಲ್ಲ’ ಎಂದರು.

ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಮನೋಜ್, ‘ರಾಷ್ಟ್ರಮಟ್ಟದ ಪರೀಕ್ಷೆಗಳ ಭದ್ರತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವ ಕ್ರಮಗಳನ್ನು ಸರ್ಕಾರ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಯುವ ಕಾಂಗ್ರೆಸ್ನ ಅಜ್ಜಂಪುರ ಘಟಕದ ಅಧ್ಯಕ್ಷ ಚಂದ್ರನಾಯ್ಕ ಮತ್ತು ಪದಾಧಿಕಾರಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-126-1307696931

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.