ತರೀಕೆರೆ: ನೇರಲಕೆರೆ ಶ್ರೀಅಮೃತೇಶ್ವರ ಪ್ರೌಢಶಾಲೆಯಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ ನಡೆಯಿತು.

ವಿದ್ಯಾರ್ಥಿ ಶಾಶ್ವತ ಅವರ ಪೋಷಕ ರಾದ ದೀಪಾ ಮಾತನಾಡಿ, ‘ಈ ಶಾಲೆಯ ವಾತಾವರಣ ಮಕ್ಕಳ ಜ್ಞಾನಾರ್ಜನೆಗೆ ಪೂರಕವಾಗಿದೆ. ಇಲ್ಲಿ ಉತ್ತಮ ಶಿಕ್ಷಣ ನೀಡಲಾಗುತ್ತದೆ ಎಂಬ ಮಾಹಿತಿ ತಿಳಿದು ನಮ್ಮ ಮಗಳನ್ನು ಈ ಶಾಲೆಗೆ ಸೇರಿಸಿದ್ದೇವೆ. ಮಕ್ಕಳು ಸುಂದರ ವಾತಾವರಣದಲ್ಲಿ ಉತ್ತಮವಾಗಿ ವಿದ್ಯಾಭ್ಯಾಸ ಮಾಡಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ಆಶಿಸಿದರು.

ವಿದ್ಯಾರ್ಥಿನಿ ವಂದನಾ ಅವರ ಪೋಷಕರಾದ ನಾಗರಾಜ್ ಮಾತನಾಡಿ, ‘ಮಕ್ಕಳಿಗೆ ಪುಷ್ಪಾರ್ಚನೆ ಮಾಡಿ, ಚಾಕ್ಲೇಟ್ ನೀಡಿ ಶಾಲಾ ಆರಂಭೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಇದರಿಂದ ಶಾಲೆಯಲ್ಲಿನ ಶಿಸ್ತು ಮತ್ತು ಮಕ್ಕಳ ಮೇಲಿನ ಕಾಳಜಿ ನಮಗೆ ಮನವರಿಕೆಯಾಗಿದೆ’ ಎಂದರು.

ವಿದ್ಯಾರ್ಥಿನಿ ಜನನಿ ಅವರ ಪೋಷಕರಾದ ಪಾರ್ವತಮ್ಮ, ‘ಈ ಶಾಲೆಯಲ್ಲಿ ನಮ್ಮ ಮಗಳು ವಿದ್ಯಾಭ್ಯಾಸ ಮಾಡುತ್ತಿರುವುದು ಸಂತಸದ ಸಂಗತಿ’ ಎಂದು ಹೇಳಿದರು.

ಪ್ರೌಢಶಾಲೆಯ ಕನ್ನಡ ಶಿಕ್ಷಕ ಸತೀಶ್ ನಂದಿಹಳ್ಳಿ ಮಾತನಾಡಿ, ‘ಮಕ್ಕಳು ಉತ್ತಮ ಶಿಕ್ಷಣ ಪಡೆದು ಭವ್ಯ ಭವಿಷ್ಯ ಕಟ್ಟಿಕೊಳ್ಳಬೇಕು. ಕಲಿಕೆ ನಿರಂತರ ಪ್ರಕ್ರಿಯೆಯಾಗಿದ್ದು, ಸ್ಪರ್ಧಾತ್ಮಕ ಜಗತ್ತಿನಲ್ಲಿ ಉತ್ತಮ ವಿದ್ಯಾಭ್ಯಾಸವೇ ಅಸ್ತಿತ್ವ ರೂಪಿಸುತ್ತದೆ. ಉತ್ತಮ ಗುಣಗಳನ್ನು ಅಳವಡಿಸಿಕೊಂಡು ಹಾಸ್ಟೆಲ್ ಸ್ವಚ್ಛತೆಯನ್ನೂ ಕಾಪಾಡಬೇಕು’ ಎಂದು ತಿಳಿಸಿದರು.

ಶಾಲಾ ಸ್ಥಳೀಯ ಸಲಹಾ ಸಮಿತಿ ಸದಸ್ಯೆ ಪಾರ್ವತಮ್ಮ, ಉಪಾಧ್ಯಕ್ಷ ಷಡಾಕ್ಷರಪ್ಪ ಹಾಗೂ ಮುಖ್ಯ ಶಿಕ್ಷಕ ಹಾಲೇಶ್ ಕೆ.ಟಿ. ಮಾತನಾಡಿದರು.

ಶಿಕ್ಷಕರು, ಶಾಲಾ ಸಿಬ್ಬಂದಿ, ಹಾಸ್ಟೆಲ್ ಸಿಬ್ಬಂದಿ, ಬಿಸಿಯೂಟ ಸಿಬ್ಬಂದಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-126-1461848151

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.