ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತರೀಕೆರೆ: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಆಗ್ರಹ

ಪುರಸಭೆ ಸದಸ್ಯರಿಂದ ಸಾಂಕೇತಿಕ ಪ್ರತಿಭಟನೆ
Last Updated 17 ಆಗಸ್ಟ್ 2022, 5:05 IST
ಅಕ್ಷರ ಗಾತ್ರ

ತರೀಕೆರೆ: ಪಟ್ಟಣದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 206 ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚಲು ಆಗ್ರಹಿಸಿ ಪುರಸಭೆ ಸದಸ್ಯರು ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ದಶಕದಿಂದ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ರಸ್ತೆ ಅಭಿವೃದ್ಧಿಯಾಗಿಲ್ಲ, ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳಿವೆ. ತುರ್ತಾಗಿ ರಸ್ತೆ ಅಭಿವೃದ್ಧಿ ಪಡಿಸಬೇಕಿದೆ. ಪ್ರತಿನಿತ್ಯ 20 ಸಾವಿರಕ್ಕೂ ಹೆಚ್ಚು ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತವೆ. ವೃದ್ಧರು, ಮಕ್ಕಳು, ವಿದ್ಯಾರ್ಥಿಗಳು, ಸಾರ್ವಜನಿಕರು ರಸ್ತೆ ದಾಟಲು ಪರದಾಡಬೇಕಾಗಿದೆಎಂದು ಪ್ರತಿಭಟನಕಾರರು ದೂರಿದರು.

ಗುಂಡಿ ಬಿದ್ದ ರಸ್ತೆಯಲ್ಲಿ ಅಪಘಾತಗಳು ಹೆಚ್ಚುತ್ತಿವೆ. ಸಾರ್ವಜನಿಕರ ಓಡಾಟಕ್ಕೆ ಪಾದಚಾರಿ ರಸ್ತೆ ನಿರ್ಮಿಸಿ, ರಸ್ತೆಯ ಬದಿಯಲ್ಲಿ ನೀರು ಹರಿದು ಹೋಗಲು ಸೂಕ್ತ ಚರಂಡಿ ನಿರ್ಮಿಣ ಮಾಡಿ ರಸ್ತೆ ವಿಭಜಕಗಳನ್ನು ಅಳವಡಿಸಬೇಕು ಎಂದು ಆಗ್ರಹಿಸಿದರು.

ಹೆದ್ದಾರಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಸಾರ್ವಜನಿಕರ ಬೆಂಬಲದೊಂದಿಗೆ ತೀವ್ರ ಸ್ವರೂಪದ ಹೋರಾಟ ಆಯೋಜಿಸಲಾಗುವುದು ಎಂದು ಅವರು ಎಚ್ಚರಿಸಿದರು.

ಪಟ್ಟಣದ ಕೋಡಿಕ್ಯಾಂಪ್ ಓಂ ವೃತ್ತದಿಂದ ಮೆರವಣಿಗೆ ಮೂಲಕ ಗಾಂಧಿ ವೃತ್ತದಲ್ಲಿ ಸೇರಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಪೂರ್ಣಿಮಾ ಅವರಿಗೆ ಮನವಿ ಸಲ್ಲಿಸಲಾಯಿತು.

ಪುರಸಭೆ ಅಧ್ಯಕ್ಷೆ ಯಶೋದಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ದಾದಾಪೀರ್, ಸದಸ್ಯರಾದ ಟಿ.ಎಂ.ಭೋಜರಾಜ್, ಲೋಕೇಶ್, ಟಿ.ಜಿ.ಶಶಾಂಕ್, ಕುಮಾರ್, ಪರಮೇಶ್, ಚೇತನ್, ಗೀತಾ, ಮಾಜಿ ಅಧ್ಯಕ್ಷರಾದ ರಂಗನಾಥ್, ವರ್ಮಪ್ರಕಾಶ್, ಕಾಂಗ್ರೆಸ್ ಮುಖಂಡ ಗಿರಿರಾಜ್ ಹಾಗೂ ಇತರೆ ಪುರಸಭೆ ಸದಸ್ಯರು, ಮುಖಂಡರು ಇದ್ದರು.

ಇಲ್ಲಿನ ಹೆದ್ದಾರಿ ಹದಗೆಟ್ಟ ಬಗ್ಗೆ ‘ಪ್ರಜಾವಾಣಿ’ ಪತ್ರಿಕೆಯಲ್ಲಿ ಆ.11ರಂದು ‘ಹೊಂಡಗುಂಡಿಯ ರಾಷ್ಟೀಯ ಹೆದ್ದಾರಿ’ ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಕಟವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT