ತರೀಕೆರೆ: ಸಂವಿಧಾನವು ಸಾರ್ವಜನಿಕರಿಗೆ ಆರೋಗ್ಯಕರವಾಗಿ ಪ್ರತಿಭಟಿಸುವ ಹಕ್ಕು ನೀಡಿದರೂ, ಅದನ್ನು ದುರುಪಯೋಗಪಡಿಸಿಕೊಂಡು ಕೆಲ ದಿನಗಳ ಹಿಂದೆ ಬಿಜೆಪಿ ಕಾರ್ಯಕರ್ತರು ‘ನಾಗರಿಕ ವೇದಿಕೆ’ ಹೆಸರಿನಲ್ಲಿ ಶಾಸಕ ಜಿ.ಎಚ್. ಶ್ರೀನಿವಾಸ್ ವಿರುದ್ಧ ನಡೆಸಿದ ಪ್ರತಿಭಟನೆ ನಾಗರಿಕ ಸಮಾಜ ತಲೆತಗ್ಗಿಸುವಂತದ್ದು ಎಂದು ತರೀಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಯು. ಫಾರೂಕ್ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಶಾಸಕ ಡಿ.ಎಸ್. ಸುರೇಶ್ 10 ವರ್ಷ ಹಾಗೂ ಜಿ.ಎಚ್. ಶ್ರೀನಿವಾಸ್ 8 ವರ್ಷ ಶಾಸಕರಾಗಿದ್ದು, ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಯಾರು ಹೆಚ್ಚು ಕೆಲಸ ಮಾಡಿದ್ದಾರೆ ಎಂಬುದರ ಕುರಿತು ಬಹಿರಂಗ ಚರ್ಚೆಗೆ ಸಿದ್ಧ ಎಂದು ಸವಾಲು ಹಾಕಿದರು.

ಪಟ್ಟಣದ ಸೋಮೇಶ್ವರ ಬಡಾವಣೆಯಲ್ಲಿ ₹3.97 ಕೋಟಿ ವೆಚ್ಚದಲ್ಲಿ ಮೌಲಾನಾ ಅಜಾದ್ ಮಾದರಿ ಶಾಲೆ ನಿರ್ಮಾಣವಾಗುತ್ತಿದೆ. ಕಾಮಗಾರಿ ಸ್ಥಳಕ್ಕೆ ತೆರಳಿ ಕಳಪೆ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿ, ಗಲಾಟೆ ನಡೆಸಿರುವುದು ಸರಿಯಲ್ಲ. ಈ ಘಟನೆಗೆ ಶಾಸಕರಿಗೆ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದರು.

ಪಟ್ಟಣದ ಮುಖ್ಯರಸ್ತೆ ರಾಷ್ಟ್ರೀಯ ಹೆದ್ದಾರಿ 206ಕ್ಕೆ ಸೇರಿದ್ದರೂ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಸ್ತೆ ಅಭಿವೃದ್ಧಿಗೆ ಅನುದಾನ ತರಲಾಗಿಲ್ಲ. 2023ರ ವಿಧಾನಸಭಾ ಚುನಾವಣೆಯ ವೇಳೆ ನೀಡಿದ ಭರವಸೆಯಂತೆ ರಾಜ್ಯ ಸರ್ಕಾರದಿಂದ ವಿವಿಧ ಮೂಲಗಳಿಂದ 4 ಕಿ.ಮೀ. ಉದ್ದದ ನಾಲ್ಕುಪಥ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಇದನ್ನು ಸಹಿಸಿಕೊಳ್ಳದೇ ಆರೋಪ ಮಾಡುವುದು ಸರಿಯಲ್ಲ ಎಂದರು.

ಪಟ್ಟಣದ ಹಳೆಯ ಬಸ್ ನಿಲ್ದಾಣದ ಸ್ಥಳದಲ್ಲಿ ₹9.18 ಕೋಟಿ ವೆಚ್ಚದಲ್ಲಿ ನೂತನ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಅದನ್ನು ಕಾಟಾಚಾರದ ಕಾಮಗಾರಿ ಎಂದು ಹೇಳುವುದು ಅಸಂಬದ್ಧ ಎಂದು ಹೇಳಿದರು.

ಕಾಂಗ್ರೆಸ್ ನಗರಾಧ್ಯಕ್ಷ ಪ್ರಕಾಶ್ ವರ್ಮಾ ಮಾತನಾಡಿ, ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ಎಲ್. ರಮೇಶ್ ಶಾಸಕರು ಹಾಗೂ ಅವರ ಕುಟುಂಬದ ಬಗ್ಗೆ ಹಗುರವಾಗಿ ಮಾತನಾಡಿರುವುದು ಖಂಡ ನೀಯ. ಇದೇ ರೀತಿಯ ಹೇಳಿಕೆಗಳು ಮರುಕಳಿಸಿದರೆ ಸೂಕ್ತ ಕ್ರಮ ಕೈಗೊಳ್ಳಲಾ ಗುವುದು ಎಂದು ಅವರು ಎಚ್ಚರಿಸಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷೆ ಹೇಮಲತಾ ರೇವಣ್ಣ ಸೇರಿದಂತೆ ಪಕ್ಷದ ಮುಖಂಡರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-126-883083206

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.