ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತರೀಕೆರೆ: ಅಂಡರ್ ಪಾಸ್‌ಗೆ ಆಗ್ರಹಿಸಿ ಪ್ರತಿಭಟನೆ

Last Updated 2 ಜುಲೈ 2022, 4:28 IST
ಅಕ್ಷರ ಗಾತ್ರ

ತರೀಕೆರೆ: ಪಟ್ಟಣದ ಸಮೀಪ ಹಾದು ಹೋಗುತ್ತಿರುವ ರಾಷ್ಟ್ರೀಯ ಹೆದ್ದಾರಿ ಯಲ್ಲಿ ದ್ಯಾಂಪುರಕ್ಕೆ ಹೋಗಲು ಅಂಡರ್ ಪಾಸ್ ನಿರ್ಮಾಣಕ್ಕೆ ಆಗ್ರಹಿಸಿ ರೈತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಗ್ರಾಮಕ್ಕೆ ಹೋಗಲು ನಕಾಶೆಯಲ್ಲಿ ದಾರಿ ಇದ್ದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ದಾರಿಯನ್ನು ಬಿಡದಿರುವುದರಿಂದ ಗ್ರಾಮಕ್ಕೆ ಸಂಪರ್ಕ ಇಲ್ಲದಂತೆ ಆಗುತ್ತದೆ. ಹೀಗಾಗಿ, ವಿದ್ಯಾರ್ಥಿಗಳಿಗೆ, ರೈತರಿಗೆ ದಿನನಿತ್ಯ ಓಡಾಟಕ್ಕೆ ತೊಂದರೆಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಿ ಅಂಡರ್‌ಪಾಸ್ ನಿರ್ಮಿಸಬೇಕು ಎಂದು ಚಿಂತಕ ಮನಸೂಳಿ ಮೋಹನ್ ಒತ್ತಾಯಿಸಿದರು.

ಅಂಡರ್‌ಪಾಸ್ ನಿರ್ಮಿಸಲು ಶಾಸಕರು ಸೂಚಿಸಿದ್ದರೂ ಅಧಿಕಾರಿಗಳು ಕ್ರಮಕೈಗೊಂಡಿಲ್ಲ. ತಕ್ಷಣ ಅದರ ಬಗ್ಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ರೈತ ಮುಖಂಡರಾದ ಆನಂದಪ್ಪ, ಮಹಾಲಿಂಗಪ್ಪ, ಸೋಮಣ್ಣ, ಗೋಪಿ, ಮಹೇಶ್, ವೆಂಕಟೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT