ತರೀಕೆರೆ: ತಾಲ್ಲೂಕು ಕಚೇರಿ ಮತ್ತು ಇತರೆ ಇಲಾಖೆಗಳಲ್ಲಿ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ತೊಂದರೆಯಾಗುತ್ತಿರುವುದನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದಿಂದ ತರೀಕೆರೆ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಸಾಮಾಜಿಕ ಭದ್ರತಾ ಯೋಜನೆಗಳಾದ ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿದಂತೆ ಹಲವು ಸರ್ಕಾರಿ ಯೋಜನೆಗಳನ್ನು ಪಡೆದುಕೊಳ್ಳಲು ಕಚೇರಿಗಳಿಗೆ ಬರುವ ಅಮಾಯಕ ಜನರನ್ನು ವಂಚನೆ ಮಾಡುತ್ತಿದ್ದು, ಕೆಲ ಮಹಿಳೆಯರಿಗೆ ತೊಂದರೆ ನೀಡಿದ್ದಾರೆ. ಈ ಬಗ್ಗೆ ವೇದಿಕೆಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಅವುಗಳ ಸತ್ಯಾಸತ್ಯತೆ ಪರಿಶೀಲಿಸಿದಾಗ ನಿಜಾಂಶ ಬೆಳಕಿಗೆ ಬಂದಿದೆ. ಇದನ್ನು ಖಂಡಿಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷ ಬಿ.ಪಿ. ಚಂದ್ರಶೇಖರ್ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-126-947105290

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.