ತರೀಕೆರೆ: ತಾಲ್ಲೂಕಿನ ಸುಮಾರು 50 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಿಂದ ಅಂತರ್ಜಲ ಹೆಚ್ಚಾಗಲಿದ್ದು, ಈ ಭಾಗದ ಜನ ಮತ್ತು ಜಾನುವಾರುಗಳಿಗೆ ನೀರಿನ ಸಮಸ್ಯೆ ಕಡಿಮೆಯಾಗಲಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ಜಿಲ್ಲೆಯ ತರೀಕೆರೆ, ಕಡೂರು, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕು ಸೇರಿದಂತೆ ಭದ್ರಾ ಜಲಾಶಯದಿಂದ ಏತ ನೀರಾವರಿ ಮೂಲಕ 245 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಭಾಗವಾಗಿ ತರೀಕೆರೆ ತಾಲ್ಲೂಕಿನ 50 ಕೆರೆಗಳಿಗೆ ನೀರು ತುಂಬಿಸುವ ಮೊದಲನೇ ಹಂತದ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.

ಲಿಂಗದಹಳ್ಳಿ ಭಾಗದಲ್ಲಿ ಮಳೆಯ ಪ್ರಮಾಣ ಕಡಿಮೆ. ಈ ಭಾಗದ ಕೆರೆಗಳು ತುಂಬುವುದರಿಂದ ರೈತರಲ್ಲಿ ಮಂದಹಾಸ ಮೂಡಲಿದೆ. ₹1,280 ಕೋಟಿ ವೆಚ್ಚದಲ್ಲಿ ರೂಪುಗೊಂಡಿರುವ ಈ ಯೋಜನೆಯಿಂದ ತರೀಕೆರೆ ತಾಲ್ಲೂಕಿನ 50 ಕೆರೆಗಳಿಗೆ ನೀರು ತುಂಬಿಸಲಾಗುವುದು. ಈ ಯೋಜನೆಗೆ 2017ರಲ್ಲಿ ವಾಟರ್ ಅಲೋಕೇಷನ್ ಮಾಡಿಸಲಾಗಿತ್ತು. ಚುನಾವಣೆಗೂ ಮುನ್ನವೇ ತರೀಕೆರೆ ತಾಲ್ಲೂಕಿನಲ್ಲಿ ನಾವು ಕೈಗೊಳ್ಳುವ ಯೋಜನೆಗಳ ಬಗ್ಗೆ ಕರಪತ್ರ ಮುದ್ರಿಸಿ ಹಂಚಲಾಗಿತ್ತು. ಅದರಂತೆ ಕಾರ್ಯೋನ್ಮುಖರಾಗಿದ್ದೇವೆ. ಮುಂದಿನ 15 ದಿನಗಳ ಕಾಲ ಕೆರೆಗಳಿಗೆ ನೀರು ತುಂಬಿಸಲು ಸಚಿವರು ಮತ್ತು ಉನ್ನತ ಅಧಿಕಾರಿಗಳ ಜತೆ ಚರ್ಚಿಸಲಾಗುವುದು. ಭದ್ರಾ ಮೇಲ್ದಂಡೆ ಯೋಜನೆಯಿಂದ 50 ಸಾವಿರ ಎಕರೆ ಪ್ರದೇಶಕ್ಕೆ ನೀರು ಒದಗಿಸಲಾಗುವುದು ಎಂದರು.

ನಂದಿ ಗ್ರಾಮದ ಬಳಿ ಸೋಲಾರ್ ಪ್ಲಾಂಟ್ ನಿರ್ಮಿಸಲು 40 ಎಕರೆ ಜಾಗ ಗುರುತಿಸಲಾಗಿದೆ. ಈ ಘಟಕದಿಂದ ಉತ್ಪತ್ತಿಯಾಗುವ ವಿದ್ಯುತ್ ಈ ಭಾಗದ ಜನರ ವಿದ್ಯುತ್ ಸಮಸ್ಯೆಯನ್ನು ಪರಿಹರಿಸಲಿದೆ. ತುಂಗಾ ನದಿಯಿಂದ 17 ಟಿಎಂಸಿ ನೀರು ಸಿಗುವುದರಿಂದ ಮುಂದಿನ ದಿನಗಳಲ್ಲಿ ಹೆಚ್ಚಿನ ನೀರಾವರಿ ಯೋಜನೆಗಳು ಕಾರ್ಯಗತಗೊಳ್ಳಲಿವೆ ಎಂದು ತಿಳಿಸಿದರು.

ಮುಖಂಡ ಜಯರಾಂ ಮಾತನಾಡಿ, ಲಿಂಗದಹಳ್ಳಿ ಹೋಬಳಿ ಬರಪೀಡಿತವಾಗಿದ್ದು, ಈ ಭಾಗದ ಕೆರೆಗಳನ್ನು ತುಂಬಿಸಬೇಕೆಂಬುದು ಹಲವು ವರ್ಷಗಳ ಬೇಡಿಕೆಯಾಗಿತ್ತು. ಇದೀಗ ಈಡೇರಿದೆ. ಇದರಿಂದ ಹೋಬಳಿ ವ್ಯಾಪ್ತಿಗೆ ನೀರಾವರಿ ಸೌಲಭ್ಯ ದೊರಕಿದಂತಾಗಿದೆ ಎಂದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಯು.ಫಾರೂಕ್, ಕಾಂಗ್ರೆಸ್ ನಗರಾಧ್ಯಕ್ಷ ಪ್ರಕಾಶ್ವರ್ಮ, ತಾ.ಪಂ.ಮಾಜಿ ಸದಸ್ಯ ಅಸ್ಲಾಂಖಾನ್, ಕೆಡಿಪಿ ಸದಸ್ಯೆ ರಚನಾಶ್ರೀನಿವಾಸ್, ತಾ.ಪಂ.ಇಒ ಆರ್.ದೇವೇಂದ್ರಪ್ಪ, ಬಗರ್ಹುಕುಂ ಸಮಿತಿ ಸದಸ್ಯ ಟಿ.ಎನ್.ಜಗದೀಶ್, ರೈತ ಸಂಘದ ಜಿಲ್ಲಾಧ್ಯಕ್ಷ ತಿಪ್ಪೇಶ್, ಮುಖಂಡರಾದ ಪ್ರಸನ್ನ, ಹರೀಶ್, ದೋರನಾಳು ತಿಪ್ಪೇಶಪ್ಪ, ಪಿಡಿಒ ಚೇತನ್, ನೀರಾವರಿ ಇಲಾಖೆಯ ಅಧಿಕಾರಿಗಳು,ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-126-103420295

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.