ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಉಪ್ಪಾರ ಸಮುದಾಯದ ಶೈಕ್ಷಣಿಕ ಸಾಧನೆ ಹೆಮ್ಮೆ ತಂದಿದೆ: ಶಾಸಕ ಕೆ‌.ಎಸ್. ಆನಂದ್

Published 23 ಜೂನ್ 2024, 16:08 IST
Last Updated 23 ಜೂನ್ 2024, 16:08 IST
ಅಕ್ಷರ ಗಾತ್ರ

ಕಡೂರು: ಉಪ್ಪಾರ ಸಮಾಜದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ಮಾಡಿ ಅತ್ಯುನ್ನತ ಹುದ್ದೆಗಳಲ್ಲಿದ್ದಾರೆ ಎಂಬುದು ಹೆಮ್ಮೆಯ ವಿಚಾರ ಎಂದು ಶಾಸಕ ಕೆ‌.ಎಸ್. ಆನಂದ್ ಹೇಳಿದರು.

ಚಿಕ್ಕಮಗಳೂರು ಜಿಲ್ಲಾ ಮತ್ತು ತಾಲ್ಲೂಕು ಉಪ್ಪಾರ ಸಂಘ ಕಡೂರಿನಲ್ಲಿ ಭಾನುವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರದಲ್ಲಿ ಅವರು ಮಾತನಾಡಿದರು.

‘ಯಾವುದೇ ಸಮಾಜದ ಅಭಿವೃದ್ಧಿಗೆ ಸಂಘಟನೆ ಮತ್ತು ಶಿಕ್ಷಣ ಬಹುಮುಖ್ಯ. ವೈಯುಕ್ತಿಕ ಹಿತಾಸಕ್ತಿ ಬಿಟ್ಟು ಪರಸ್ಪರ ಸಹಕಾರದೊಂದಿಗೆ ಸಂಘಟಿತರಾಗಿ ಸಮಾಜದ ಹಿತಾಸಕ್ತಿ ಕಾಪಾಡುವಲ್ಲಿ ಎಲ್ಲರೂ ಶ್ರಮಿಸಬೇಕು. ಉಪ್ಪಾರ ಜನಾಂಗದ ಬಗ್ಗೆ ಅಪಾರ ಪ್ರೀತಿ, ಗೌರವವಿದೆ. ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಉಪ್ಪಾರ ಸಮುದಾಯ ಭವನಕ್ಕೆ ಸಹಕಾರ ನೀಡುತ್ತೇನೆ’ ಎಂದರು.

ಭಗೀರಥ ಪೀಠದ ಪುರುಷೋತ್ತಮಾನಂದ ಪುರಿ ಸ್ವಾಮೀಜಿ ಮಾತನಾಡಿದರು. ಎಸ್.ಎಸ್‌.ಎಲ್.ಸಿ ಮತ್ತು ಪಿಯುಸಿ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು .ಉಪ್ಪಾರ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಮಲ್ನಾಡ್ ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಶಿಕ್ಷಕ ಟಿ.ಆರ್.ಲಕ್ಕಪ್ಪ ಪ್ರಸ್ತಾವಿಕವಾಗಿ ಮಾತನಾಡಿದರು. ತರೀಕೆರೆ ಶಾಸಕ ಜಿ.ಎಚ್.ಶ್ರೀನಿವಾಸ್, ಉಪ್ಪಾರ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವೈ‌.ಎಂ.ತಿಪ್ಪೇಶ್, ತಾಲ್ಲೂಕು ಅಧ್ಯಕ್ಷ ಜಿ‌.ಸತೀಶ್, ಉಪ್ಪಾರ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಲೋಕೇಶ್ ಬಾಬು, ಪ್ರಧಾನ ಕಾರ್ಯದರ್ಶಿ ಎನ್.ಧನಂಜಯ, ಜಿ.ಎಂ.ಲಕ್ಷ್ಮಣ, ಮೀನುಗಾರಿಕಾ ಇಲಾಖೆ ಸಹಾಯಕ ನಿರ್ದೇಶಕಿ ಪಂಕಜ, ಎಂ.ಕೆ.ಸತೀಶ್, ಪಿ.ಎಲ್.ಡಿ.ಬ್ಯಾಂಕ್‌ ಮಾಜಿ ಅಧ್ಯಕ್ಷ ವಿರೂಪಾಕ್ಷಪ್ಪ, ಸಮಾಜದ ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT