ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೂಡಿಗೆರೆ | 'ವಿದ್ಯಾರ್ಥಿಗಳ ಕುಂದು ಕೊರತೆ ಆಲಿಸಿದ ಶಾಸಕಿ'

Published 11 ಜೂನ್ 2024, 14:10 IST
Last Updated 11 ಜೂನ್ 2024, 14:10 IST
ಅಕ್ಷರ ಗಾತ್ರ

ಮೂಡಿಗೆರೆ: ಭವಿಷ್ಯದಲ್ಲಿ ಉನ್ನತ ಸ್ಥಾನಗಳನ್ನು ಪಡೆಯಲು ಶಿಕ್ಷಣವು ರಹದಾರಿಯಾಗಿದ್ದು ಯಾವುದೇ ವಿದ್ಯಾರ್ಥಿಯು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.

ಪಟ್ಟಣದ ವಿವಿಧ ಶಾಲೆ, ಕಾಲೇಜುಗಳಿಗೆ ಮಂಗಳವಾರ ಭೇಟಿ ನೀಡಿ ವಿದ್ಯಾರ್ಥಿಗಳ ಕುಂದುಕೊರತೆ ಆಲಿಸಿ ಅವರು ಮಾತನಾಡಿದರು

‘ಶಿಕ್ಷಣದಿಂದ ಯಾರೂ ವಂಚಿತರಾಗಬಾರದು. ಶಿಕ್ಷಣದ ಮೂಲಕ ಜ್ಞಾನ ಸಂಪಾದಿಸಿದಾಗ ಮಾತ್ರ ಭವಿಷ್ಯದಲ್ಲಿ ಉನ್ನತ ಸ್ಥಾನ ಹಾಗೂ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ. ಈಗಾಗಲೇ ಬೇಸಿಗೆ ರಜೆ ಮುಗಿದು ಶಾಲೆಗಳು ಪ್ರಾರಂಭಗೊಂಡಿವೆ. ರಾಜ್ಯ ಸರ್ಕಾರವು ಗುಣಮಟ್ಟದ ಶಿಕ್ಷಣಕ್ಕೆಆದ್ಯತೆ ನೀಡುತ್ತಿದ್ದು, ಅದರ ಸದುಪಯೋಗವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು. ಮೊಬೈಲ್ ಬಳಕೆ ಕಡಿಮೆ ಮಾಡಿಕೊಂಡು ಉತ್ತಮ ಶಿಕ್ಷಣ ಪಡೆದು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಶಾಲೆಯಲ್ಲಿ ಯಾವುದೇ ಸಮಸ್ಯೆ ಇದ್ದರೂ ಪ್ರಾಂಶುಪಾಲರು ಅಥವಾ ಸಂಬಂಧಿಸಿದವರ  ಗಮನಕ್ಕೆ ತರಬೇಕು’ ಎಂದರು.

ಶಾಲೆ ಕೊಠಡಿಗಳ ನಿರ್ವಹಣೆಯ ಪರಿಶೀಲಿಸಿದರು. ಡಿಎಸ್‍ಬಿಜಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿ ಆಡಳಿತ ಮಂಡಳಿ ಸದಸ್ಯರೊಂದಿಗೆ ಸಭೆ ನಡೆಸಿ, ಕಾಲೇಜು ಅಭಿವೃದ್ಧಿ, ದಾಖಲಾತಿ ಹಾಗೂ ಇತರೆ ಸಮಸ್ಯೆಗಳ ಬಗ್ಗೆ ವಿಚಾರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT