ಶುಕ್ರವಾರ, ಫೆಬ್ರವರಿ 28, 2020
19 °C

ಚಿಕ್ಕಮಗಳೂರು: ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ನಗರದ ಆಜಾದ್ ವೃತ್ತದಲ್ಲಿ ಕೆಎಸ್ಆರ್‌ಟಿಸಿ ಬಸ್ಸು ಡಿಕ್ಕಿ ಹೊಡೆದು ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸಂಜೆ 6 ಗಂಟೆಗೆ ಈ ಅಪಘಾತ ಸಂಭವಿಸಿದೆ. ಬಸ್ಸಿನ ಚಕ್ರಗಳು ಕೆಳಗೆ ಸಿಕ್ಕು ಮೃತರ ದೇಹ ಛಿದ್ರವಾಗಿದೆ. ಬಸ್ಸು ಚಿಕ್ಕಮಗಳೂರಿನಿಂದ ಜಾವಗಲ್ ಕಡೆಗೆ ಸಂಚರಿಸುತ್ತಿತ್ತು ಎಂದು ಗೊತ್ತಾಗಿದೆ. 

'ಪಾದಚಾರಿ ರಸ್ತೆದಾಟುವಾಗ ಬಸ್ಸಿಗೆ ಡಿಕ್ಕಿಯಾಗಿ ಬಿದ್ದರು, ಹಿಂಬದಿಯ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟರು' ಎಂದು ಪ್ರತ್ಯಕ್ಷದರ್ಶಿಯೊಬ್ಬರು 'ಪ್ರಜಾವಾಣಿ'ಗೆ ತಿಳಿಸಿದರು.

ಪೊಲೀಸರು ಮತ್ತು  ಕೆಎಸ್ ಆರ್ಟಿಸಿ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿದ್ದಾರೆ. ಮುಗುಳವಳ್ಳಿಯ ನಿವೃತ್ತ ಶಿಕ್ಷಕ  ಎಂ.ಆರ್. ಶಂಭುಲಿಂಗಪ್ಪ (70) ಎಂಬುವವರು ಮೃತರಾದ ದುರ್ದೈವಿ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು