ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶೃಂಗೇರಿ ತಾಲ್ಲೂಕಿನಲ್ಲಿ 10 ಸಾವಿರ ಗಿಡ ನೆಡುವ ಗುರಿ

Published 27 ಜೂನ್ 2024, 14:29 IST
Last Updated 27 ಜೂನ್ 2024, 14:29 IST
ಅಕ್ಷರ ಗಾತ್ರ

ಕುದುರೆಗುಂಡಿ(ಎನ್.ಆರ್.ಪುರ): ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶೃಂಗೇರಿ ತಾಲ್ಲೂಕಿನಲ್ಲಿ ಅರಣ್ಯ ಇಲಾಖೆಯ ಸಹಕಾರದೊಂದಿಗೆ 10 ಸಾವಿರ ಗಿಡ ನೆಡುವ ಕಾರ್ಯಕ್ರಮ ಪ್ರಾರಂಭಿಸಲಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ಶಿವಕುಮಾರ್ ಹೇಳಿದರು.

ತಾಲ್ಲೂಕಿನ ಗಡಿಭಾಗದ ಕುದುರೆಗುಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುದುರೆಗುಂಡಿಯ ವಲಯದ ಆಶ್ರಯದಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನರಸಿಂಹರಾಜಪುರ ತಾಲ್ಲೂಕಿನಲ್ಲೂ 4 ಸಾವಿರ ಗಿಡಗಳನ್ನು ನೆಡಲಾಗುವುದು.  ಪರಿಸರ ದಿನಾಚರಣೆ ಕೇವಲ ಒಂದು ದಿನಕ್ಕೆ ಮುಕ್ತಾಯವಾಗಬಾರದು. ಪ್ರತಿ ದಿನ ಪರಿಸರ ಸಂರಕ್ಷಣೆ ಬಗ್ಗೆ ಚಿಂತನೆ ಮಾಡಬೇಕು. ಮಕ್ಕಳು ರಸ್ತೆ ಬದಿಯಲ್ಲಿ, ಶಾಲಾ ಆವರಣದಲ್ಲಿ ಗಿಡ ನೆಡಬೇಕು. ಬಯಲು ಸೀಮೆಯಲ್ಲಿ ಉಷ್ಣಾಂಶ ಮಿತಿ ಮೀರಿದೆ. ಹವಮಾನದಲ್ಲಿ ವ್ಯತ್ಯಾಸವಾಗುತ್ತಿದೆ. ಮಳೆಗಾಲದಲ್ಲಿ ಮಳೆ ಬರುತ್ತಿಲ್ಲ. ಬೇಸಿಗೆ, ಚಳಿಗಾಲದಲ್ಲಿ ಅಕಾಲಿಕ ಮಳೆಯಾಗುತ್ತಿದೆ. ಮನುಷ್ಯರು ಹಾಗೂ ಕಾಡು ಪ್ರಾಣಿಗಳ ಸಂಘರ್ಷ ಜಾಸ್ತಿಯಾಗುತ್ತಿದೆ’ ಎಂದರು.

ಕೊಪ್ಪ ವೃತ್ತ ಉಪ ವಲಯ ಅರಣ್ಯಾಧಿಕಾರಿ ಶಫಿ ಅಹಮ್ಮದ್ ಪರಿಸರದ ಬಗ್ಗೆ ಮಾಹಿತಿ ನೀಡಿದರು. ಎಸ್‌ಡಿಎಂಸಿ ಅಧ್ಯಕ್ಷೆ ದೀಪ್ತಿ ಕಾರ್ಯಕ್ರಮ ಉದ್ಘಾಟಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿದ್ಯಾ, ಸದಸ್ಯರಾದ ಕವಿತಾ, ಅಂಬಿಕಾ, ಒಕ್ಕೂಟದ ಅಧ್ಯಕ್ಷ ರಾಜೇಶ್, ಶಾಲೆಯ ಮುಖ್ಯ ಶಿಕ್ಷಕಿ ಲೀನಾ ಡಿ.ಕಾಸ್ಟಾ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುದುರೆಗುಂಡಿ ವಲಯ ಮೇಲ್ವಿಚಾರಕ ಸುಧೀರ್ ಭಾಗವಹಿಸಿದ್ದರು. ಶಾಲಾ ಆವರಣದಲ್ಲಿ ಲಿಂಬೆ, ಕಿತ್ತಳೆ, ಹಲಸು, ಕರಿಬೇವು ಗಿಡಗಳನ್ನು ನೆಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT