ಕಡೂರು: ‘ಭಾರತೀಯ ಸಂಪ್ರದಾಯದಲ್ಲಿ ಪೂಜನೀಯ ಸ್ಥಾನ ಹೊಂದಿರುವ ಗೋಮಾತೆಯ ಕೆಚ್ಚಲು ಕೊಯ್ಯುವ ಹೀನಕೃತ್ಯ ಹಿಂದೂ ಧರ್ಮ ವಿರೋಧಿಗಳಿಂದ ಮಾತ್ರ ಸಾಧ್ಯ’ ಎಂದು ಬಿಜೆಪಿಯ ಜಿಲ್ಲಾ ಯುವ ಮೋರ್ಚಾದ ಉಪಾಧ್ಯಕ್ಷ ಭರತ್ ಕೆಂಪರಾಜು ಹೇಳಿದರು.

ತಾಲ್ಲೂಕಿನ ಚೌಳಹಿರಿಯೂರಿನಲ್ಲಿ ಹಸುವಿನ ಕೆಚ್ಚಲು ಕೊಯ್ದು ಪ್ರಕರಣ ಖಂಡಿಸಿ ಬಿಜೆಪಿ ಯುವಮೋರ್ಚಾ ವತಿಯಿಂದ ಯಗಟಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿ ಅವರು ಮಾತನಾಡಿದರು.

‘ಗೋಹತ್ಯೆ ಮಹಾಪಾಪ. ಈ ಕೃತ್ಯದ ಹಿಂದೆ ಇರುವವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ತಾಲ್ಲೂಕು ಯುವಮೋರ್ಚಾ ಅಧ್ಯಕ್ಷ ಅಜಯ್ ಒಡೆಯರ್ ಮಾತನಾಡಿ, ‘ಇಂತಹ ಹೀನ ಕೃತ್ಯ ನಮ್ಮ ತಾಲ್ಲೂಕಿನಲ್ಲಿ ಮೊದಲ ಬಾರಿಗೆ ನಡೆದಿದೆ. ಇದರ ಮರ್ಮವನ್ನು ಭೇದಿಸಬೇಕು ಎಂದು ಒತ್ತಾಯಿಸಿದರು.

ಪಿಎಸ್ಐ ಮಂಜುನಾಥ್ ಮೂಲಕ ಮನವಿ ಸಲ್ಲಿಸಲಾಯಿತು. ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ನಾಗೇಂದ್ರ ಅಗ್ನಿ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಕುಮಾರ್ ಪಟೇಲ್, ವಿಶ್ವ ಹಿಂದೂ ಪರಿಷತ್ನ ಮಂಜುನಾಥ್ ಜೈನ್, ಹಿಂದೂ ಪರ ಹೋರಾಟಗಾರ ಸುಮಾಕಾಂತ್ ಹೆಳವರ, ಪೃಥ್ವಿಕ್ ದೇವರಾಜ್, ಆಕಾಶ್ ಕೊಠಾರಿ, ಬಜರಂಗದಳ ತಾಲ್ಲೂಕು ಘಟಕದ ಅಧ್ಯಕ್ಷ ಅಭಿಷೇಕ್ ಇದ್ದರು.

ಮೇ 9ರಂದು ಚೌಳಹಿರಿಯೂರು ಬಳಿಯ ತಮ್ಮಿಹಳ್ಳಿಯಲ್ಲಿ ಶೇಖರಪ್ಪ ಎಂಬುವವರಿಗೆ ಸೇರಿದ ಹಸುವಿನ ಕೆಚ್ಚಲನ್ನು ದುಷ್ಕರ್ಮಿಗಳು ಕೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಮೇ 11ರಂದು ಯಗಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.