ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಹಕಾರ ಸಾರಿಗೆ ಸಂಸ್ಥೆ ಸ್ಥಗಿತಗೊಂಡು 3 ವರ್ಷ

ಪುನಶ್ಚೇತನಕ್ಕೆ ಸಹಾಯದ ನಿರೀಕ್ಷೆಯಲ್ಲಿ ಕಾರ್ಮಿಕರು
Last Updated 16 ಫೆಬ್ರುವರಿ 2023, 6:20 IST
ಅಕ್ಷರ ಗಾತ್ರ

ಕೊಪ್ಪ: ಮಲೆನಾಡಿನ ಹೆಮ್ಮೆಯ ಸಹಕಾರ ಸಾರಿಗೆ ಸಂಸ್ಥೆ ಆರ್ಥಿಕ ಸಂಕಷ್ಟದ ಸುಳಿಗೆ ಸಿಲುಕಿ ಬಸ್ ಸಂಚಾರ ಸ್ಥಗಿತಗೊಂಡು ಇದೇ ಫೆಬ್ರುವರಿ 16ಕ್ಕೆ ಮೂರು ವರ್ಷಗಳು ತುಂಬುತ್ತಿದ್ದು ಸಂಚಾರವಿಲ್ಲದೆ ನಿಂತ ಬಸ್‌ಗಳಿಗೆ ತುಕ್ಕು ಹಿಡಿಯುತ್ತಿದೆ.

ಬಸ್ ಸೇವೆ ಒದಗಿಸಲಾಗದೆ ಆಡಳಿತ ಮಂಡಳಿ 2020ರಲ್ಲಿ ಸಂಸ್ಥೆಯ 76 ಬಸ್‌ಗಳ ಸಂಚಾರವನ್ನು ಸ್ಥಗಿತಗೊಳಿಸಿತ್ತು. ‌

250ಕ್ಕೂ ಹೆಚ್ಚು ಕಾರ್ಮಿಕರು ಬೀದಿಗೆ ಬಂದರು. ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಫೆಬ್ರುವರಿ 17ರಿಂದ ತಾಲ್ಲೂಕು ಕಚೇರಿ ಎದುರು ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿತ್ತು. ಸಮಸ್ಯೆ ಬಗೆಹರಿಸುವ ಭರವಸೆ ಸಿಕ್ಕಿದ್ದರಿಂದ 24ರಂದು ಧರಣಿ ಸ್ಥಗಿತಗೊಳಿಸಿತ್ತು.

ಈ ಮಧ್ಯೆ ಸಂಸ್ಥೆ ಮುನ್ನಡೆಸುವುದಾಗಿ ಬೆಂಗಳೂರಿನ ಉದ್ಯಮಿ ಮಹೇಂದ್ರ ಎಂಬುವರು ಆಡಳಿತ ಮಂಡಳಿ ಜತೆಗೆ ಮಾತುಕತೆ ನಡೆಸಿದ್ದರು. ಅದು ವಿಫಲವಾಯಿತು. ನಂತರ ಸಂಸ್ಥೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಟ್ರಾನ್ಸ್‌ಪೋರ್ಟ್ ಮತ್ತು ಜನರಲ್ ಮಜ್ದೂರ್ ಸಂಘದ ನೇತೃತ್ವದಲ್ಲಿ ಕಾರ್ಮಿಕರು ನಡೆಸಿದ ಹೋರಾಟದಿಂದ ಆಡಳಿತ ಮಂಡಳಿಯಲ್ಲಿದ್ದ ಕೆಲವರ ಮೇಲೆ ಪ್ರಕರಣವೂ ದಾಖಲಾಯಿತು.

2022ರ ಜುಲೈ ತಿಂಗಳಲ್ಲಿ ಆಡಳಿತ ಮಂಡಳಿಗೆ 12 ಮಂದಿ ನಿರ್ದೇಶಕರು ಆಯ್ಕೆಯಾದರು. ಅಧ್ಯಕ್ಷರಾಗಿ ಕೆ.ಬಿ.ಸುಬ್ರಹ್ಮಣ್ಯ ಆಯ್ಕೆುಯಾದರು. ಆರ್ಥಿಕ ನೆರವು ಕೋರಿ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನ ಆಗಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT