ಕಳಸ: ‘ಅಖಿಲ ಭಾರತ ಹುಲಿ ಗಣತಿಯ ಭಾಗವಾಗಿ ಜ. 5ರಿಂದ 12ರವರೆಗೆ ಕುದುರೆಮುಖ ರಾಷ್ಟ್ರೀಯ ಉದ್ಯಾನದಲ್ಲಿ ಹುಲಿ ಗಣತಿ ಹಮ್ಮಿಕೊಳ್ಳಲಾಗಿದ್ದು, ಈ ಅವಧಿಯಲ್ಲಿ ಉದ್ಯಾನದ ವ್ಯಾಪ್ತಿಯಲ್ಲಿ ಎಲ್ಲ ಬಗೆಯ ಚಾರಣ ಅಥವಾ ಅರಣ್ಯ ಪ್ರವೇಶ ಸ್ಥಗಿತಗೊಳಿಸಲಾಗಿದೆ’ ಎಂದು ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೂಚನೆ ಹೊರಡಿಸಿದ್ದಾರೆ.

ಆದ್ದರಿಂದ ಕುದುರೆಮುಖ, ಗಂಗಡಿಕಲ್, ಕುರಂಜಾಲ್, ವಾಲಿಕುಂಜ, ನೇತ್ರಾವತಿ, ಕೊಡಚಾದ್ರಿ, ನರಸಿಂಹಪರ್ವತ ಮತ್ತು ಬಂಡಾಜೆ ಪರ್ವತಗಳಿಗೆ ಚಾರಣಕ್ಕೆ ತೆರಳುವುದಕ್ಕೆ ತಡೆ ಬೀಳಲಿದೆ. ಈ ಪ್ರದೇಶದಲ್ಲಿ ಇರುವ ಜಲಪಾತಗಳಿಗೂ ಪ್ರವಾಸಿಗರು ತೆರಳದಂತೆ ಸೂಚನೆ ನೀಡಲಾಗಿದೆ. ಈ ಪ್ರದೇಶದಲ್ಲಿ ಕಾವಲುಗಾರರನ್ನು ನೇಮಿಸಿ ಅಗತ್ಯ ಕ್ರಮ ವಹಿಸುವಂತೆ ಸೂಚನೆ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.