ತರೀಕೆರೆ: ಪಟ್ಟಣದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ಕದಳಿ ಮಹಿಳಾ ವೇದಿಕೆಯ ವತಿಯಿಂದ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸಭೆಯಲ್ಲಿ ಮಾತನಾಡಿದ ಬಿ.ಎಸ್.ಭಗವಾನ್, ನಾಡಿಗೆ ವಿಶಿಷ್ಟ ಸೇವೆ ಸಲ್ಲಿಸಿದ್ದ ಶಾಮನೂರು ಶಿವಶಂಕರಪ್ಪ ಅವರು ಬಸವಾದಿ ಶರಣರ ಅನುಯಾಯಿಯಾಗಿದ್ದರು. ಶಿಕ್ಷಣ ಸಂಸ್ಥೆಗಳ ಮೂಲಕ ಜ್ಞಾನ ದಾಸೋಹ ನಡೆಸಿದ ಶರಣಾಗಿದ್ದರು. ರಾಜಕಾರಣಿಯಾಗಿ ದಾವಣಗೆರೆ ಜಿಲ್ಲೆ ಹಾಗೂ ರಾಜ್ಯಕ್ಕೆ ಅವರು ನೀಡಿದ ಕೊಡುಗೆ ಅಪಾರವಾಗಿದೆ. ಅವರ ನಿಧನದಿಂದ ನಾಡು ನಷ್ಟ ಅನುಭವಿಸಿದೆ ಎಂದು ಹೇಳಿದರು.

ಶರಣ ಸಾಹಿತ್ಯ ಪರಿಷತ್ತು ತಾಲ್ಲೂಕು ಅಧ್ಯಕ್ಷ ಟಿ.ದಾದಾಪೀರ್ ಮಾತನಾಡಿ, ಶಿಕ್ಷಣ, ರಾಜಕೀಯ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಬಾಪೂಜಿ ವಿದ್ಯಾಸಂಸ್ಥೆಯ ಮೂಲಕ ಅವರು ನೀಡಿದ ಕೊಡುಗೆ ಸದಾ ಸ್ಮರಣೀಯವಾಗಿದೆ ಎಂದು ಹೇಳಿದರು

ಗಡಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಜಿ.ಎಸ್. ಸತೀಶ್ ಮಾತನಾಡಿದರು. ಪರಿಷತ್ತಿನ ಮುಖಂಡ ಮನಸುಳಿ ಮೋಹನ್, ಶಿವಣ್ಣ ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.