ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಲಿ ಕೊಂದು ಮುಚ್ಚಿದ ಆರೋಪ: ಇಬ್ಬರ ಬಂಧನ

Published 18 ಏಪ್ರಿಲ್ 2024, 17:09 IST
Last Updated 18 ಏಪ್ರಿಲ್ 2024, 17:09 IST
ಅಕ್ಷರ ಗಾತ್ರ

ಮೂಡಿಗೆರೆ: ತಾಲ್ಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ಹುಲಿಯೊಂದನ್ನು ಕೊಂದು ಮುಚ್ಚಿದ ಆರೋಪದಲ್ಲಿ ಇಬ್ಬರನ್ನು ಬಂಧಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮೂರು ತಿಂಗಳ ಹಿಂದೆ ಹುಲಿಯ ತಲೆ ಬುರುಡೆ ಸಾಗಿಸುತ್ತಿದ್ದ ಆರೋಪದಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಹುಲಿಯನ್ನು ಕೊಂದು ಸಾರಗೋಡು ಮೀಸಲು ಅರಣ್ಯದ ಕುಂಡ್ರ ಗ್ರಾಮಕ್ಕೆ ಹೊಂದಿಕೊಂಡಂತಿರುವ ಅರಣ್ಯ‌ ಪ್ರದೇಶದಲ್ಲಿ ಗುಂಡಿ ತೋಡಿ ಮುಚ್ಚಿರುವುದಾಗಿ ಒಪ್ಪಿಕೊಂಡಿದ್ದರು ಎನ್ನಲಾಗಿದೆ. ಗುರುವಾರ ಆರೋಪಿಗಳನ್ನು ಸ್ಥಳಕ್ಕೆ ಕರೆದುಕೊಂಡು ಹೋಗಿ ಮಹಜರು ನಡೆಸಲಾಯಿತು.

‘ಹುಲಿಯನ್ನು ಕೊಂದು ಮುಚ್ಚಿದ್ದ ಪ್ರದೇಶಕ್ಕೆ ಕರೆದೊಯ್ದು ಪರಿಶೀಲನೆ‌ ಮಾಡಲಾಗಿದ್ದು, ಕಳೆಬರಹದ ಕುರುಹುಗಳು ಪತ್ತೆಯಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ’ ಎಂದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಕರಣದ ತನಿಖೆ ನಡೆಯುತ್ತಿರುವುದರಿಂದ ಆರೋಪಿಗಳ ಹೆಸರು ಬಹಿರಂಗಗೊಳಿಸುವುದಿಲ್ಲ. ತನಿಖೆ ಪೂರ್ಣಗೊಂಡ ಬಳಿಕ ಪ್ರಕರಣದ ಪೂರ್ಣ ಮಾಹಿತಿ ನೀಡಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT