ಮಂಗಳವಾರ, ಸೆಪ್ಟೆಂಬರ್ 27, 2022
27 °C
ಕಾಂಗ್ರೆಸ್‌ ಜಿಲ್ಲಾ ಕಚೇರಿಯಲ್ಲಿ ಏರ್ಪಾಡಾಗಿದ್ದ ಸಭೆ

ಚಿಕ್ಕಮಗಳೂರು: ಯುವ ಕಾಂಗ್ರೆಸ್‌ ಜಿಲ್ಲಾ ಘಟಕದ ಸಭೆಯಲ್ಲಿ 2 ಗುಂಪುಗಳ ಹೊಡೆದಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಕಾಂಗ್ರೆಸ್‌ ಜಿಲ್ಲಾ ಘಟಕದ ಕಚೇರಿಯಲ್ಲಿ ಏರ್ಪಾಡಾಗಿದ್ದ ಸಭೆಯಲ್ಲಿ ಕಾಂಗ್ರೆಸ್‌ ಯುವ ಜಿಲ್ಲಾ ಘಟಕದ ಕೆಲವರು ಕೈಕೈ ಮಿಲಾಯಿಸಿ ಹೊಡೆದಾಡಿದ್ದಾರೆ. ಯುವ ಘಟಕದ ಜಿಲ್ಲಾಧ್ಯಕ್ಷ ಕೆ.ಎಂ.ಸಂತೋಷ್‌ ಮತ್ತು ನಿತೀಶ್‌ ನಡುವೆ ಜಗಳವಾಗಿದೆ. 

ಹೊಡೆದಾಟದ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರದಾಡಿದೆ. ಕುರ್ಚಿಗಳನ್ನು ಬಿಸಾಕಿ, ಗುದ್ದಾಡಿದ್ದಾರೆ. 

ಯುವ ಕಾಂಗ್ರೆಸ್‌ ಜಿಲ್ಲಾ ಘಟಕದ  ಕಾರ್ಯದರ್ಶಿ ಸ್ಥಾನದಿಂದ ನಿತೀಶ್‌ ಅವರನ್ನು ಅಮಾನತು ಮಾಡಿದ್ದಕ್ಕೆ ಜಗಳ ವಾಡಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳ ತಿಳಿಸಿವೆ.

ಸಂತೋಷ್‌ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ, ‘ಯುವ ಘಟಕದ ರಾಜ್ಯ ಘಟಕದ ಅಧ್ಯಕ್ಷ ನಲಪ್ಪಾಡ್‌ ಅವರ ಸೂಚನೆ ಮೇರೆಗೆ ಅವರನ್ನು ಕಾರ್ಯದರ್ಶಿ ಸ್ಥಾನದಿಂದ ನಿತೀಶ್‌ ಅವರನ್ನು ರಾಜ ಘಟಕದ ಪ್ರಧಾನ ಕಾರ್ಯದರ್ಶಿ ಅಮಾನತು ಮಾಡಿದ್ದಾರೆ. ಅಮಾನತು ಮಾಡಿರುವುದಕ್ಕೂ ನನಗೂ ಸಂಬಂಧ ಇಲ್ಲ. ಪಕ್ಷದ ಕಚೇರಿಯಲ್ಲಿ ಸಭೆ ನಡೆಯುವಾಗ ಏಕಾಏಕಿ ಕಚೇರಿಗೆ ನುಗ್ಗಿ ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು