ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಡೂರು | ನೀರಿನಲ್ಲಿ ಮುಳುಗಿ ಇಬ್ಬರ ಸಾವು

Published 11 ಜೂನ್ 2024, 14:02 IST
Last Updated 11 ಜೂನ್ 2024, 14:02 IST
ಅಕ್ಷರ ಗಾತ್ರ

ಕಡೂರು: ತಾಲ್ಲೂಕಿನ ಸಿಂಗಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತಪುರ ( ದಿಬ್ಬೂರು) ಗ್ರಾಮದ ಕಟ್ಟೆಯಲ್ಲಿ  ಕಾಲು ಜಾರಿ ಬಿದ್ದು ಇಬ್ಬರು ಬಾಲಕರು ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಹೊಸದುರ್ಗ ತಾಲ್ಲೂಕಿನ ಹರಬಾಲು ಗ್ರಾಮದ ಜೀವನ್ (16)  ಹಾಗೂ ದಿಬ್ಬೂರು ಗ್ರಾಮದ ಸ್ವಾಮಿ (16) ಮೃತ ಬಾಲಕರು.

ಹಬ್ಬದ ಪ್ರಯುಕ್ತ ಕಡಿದಿದ್ದ ಕುರಿ ಮಾಂಸದ ಕರುಳು ತೊಳೆಯಲು ಕಟ್ಟೆಗೆ ಹೋಗಿದ್ದ ಸಂದರ್ಭದಲ್ಲಿ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ.ಅಲ್ಲಿದ್ದ ಕೆಲವರು ಬಾಲಕರನ್ನು ನೀರಿನಿಂದ ಹೊರತೆಗೆದು ಸಿಂಗಟಗೆರೆ ಆಸ್ಪತ್ರೆಗೆ ಕರೆದೊಯ್ದದರು. ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. ಸಿಂಗಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT