ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ–ಚಿಕ್ಕಮಗಳೂರು ಲೋಕಸಭೆ: ಜಯಪ್ರಕಾಶ್ ಹೆಗ್ಡೆ ಗೆಲುವಿಗೆ ಎಎಪಿ ಬೆಂಬಲ

Published 27 ಮಾರ್ಚ್ 2024, 15:27 IST
Last Updated 27 ಮಾರ್ಚ್ 2024, 15:27 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಲೋಕಸಭೆ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷದ(ಎಎಪಿ) ಕಾರ್ಯಕರ್ತರು ಹಾಗೂ ಮುಖಂಡರು ಉಡುಪಿ–ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರ ಗೆಲುವಿಗಾಗಿ ಶ್ರಮಿಸಲಿದ್ದಾರೆ ಎಂದು ಪಕ್ಷದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಂಗನಾಥ್ ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ ಇಂಡಿಯಾ ಒಕ್ಕೂಟದ ಭಾಗವಾಗಿ ಬೆಂಬಲ ಸೂಚಿಸಿದೆ. ಅದರಂತೆ ಜಿಲ್ಲೆಯಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು ಸಂಘಟನೆ ಮೂಲಕ ಪ್ರಚಾರ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ಕೆಲಸ ಮಾಡುತ್ತೇವೆ. ಈ ಬಾರಿ ಅವರು 1 ಲಕ್ಷ ಮತಗಳ ಅಂತರದಲ್ಲಿ ಗೆಲ್ಲುವ ಭರವಸೆ ಇದೆ ಎಂದು ಸುದ್ದಿಗೋಷ್ಠಿಯಲ್ಲಿ ಬುಧವಾರ ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರ ಬಿಜೆಪಿ ಸರ್ಕಾರ 10 ವರ್ಷದ ಆಡಳಿತದಲ್ಲಿ ಅಭಿವೃದ್ಧಿ ಶೂನ್ಯ. ಬೆಲೆ ಏರಿಕೆ, ನಿರುದ್ಯೋಗ, ಬಡತನ, ಬಡವರ ಶೋಷಣೆ ಇವುಗಳೇ ಪಕ್ಷದ ಸಾಧನೆ. ಜಯಪ್ರಕಾಶ್ ಹೆಗ್ಡೆ ಉತ್ತಮ ವರ್ಚಸ್ಸು ಹೊಂದಿದ್ದು, ಗೆಲುವು ಸಾಧಿಸಲಿದ್ದಾರೆ ಎಂದರು.

ಕೇಂದ್ರ ಸರ್ಕಾರ ಸರ್ವಾಧಿಕಾರಿ ಆಡಳಿತದ ಮೂಲಕ ರಾಜಕೀಯ ಷಡ್ಯಂತ್ರ ನಡೆಸಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರನ್ನು ಇಡಿ ತನಿಖಾ ಸಂಸ್ಥೆ ಮೂಲಕ ಬಂಧನ ಮಾಡಿದೆ. ಆರೋಪ ಮುಕ್ತರಾಗಿ ಬರುವ ವಿಶ್ವಾಸವಿದೆ ಎಂದರು.

ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಸೈಯದ್ ಜಮೀಲ್ ಅಹಮದ್ ಮಾತನಾಡಿ, ದೇಶದಲ್ಲಿ ಕಳೆದ 10 ವರ್ಷದಿಂದ ಹಿಟ್ಲರ್ ರಾಜಕೀಯ  ಇದ್ದಂತೆ ಇದೆ. ಬಿಜೆಪಿ ಅಧಿಕಾರವನ್ನು ತನ್ನ ಹಿಡಿತದಲ್ಲಿಟ್ಟುಕೊಂಡು ಪ್ರತಿಪಕ್ಷಗಳನ್ನು ಮಣಿಸಲು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡಿದೆ ಎಂದರು.

ಗೋಷ್ಠಿಯಲ್ಲಿ ಪಕ್ಷದ ರೈತಮೋರ್ಚಾ ರಾಜ್ಯಪದಾಧಿಕಾರಿ ಹೇಮಂತ್‌ಕುಮಾರ್, ಜಿಲ್ಲಾ ಕಾರ್ಯದರ್ಶಿ ಅಂಥೋಣಿ, ಎಸ್‌ಸಿ, ಎಸ್‌ಟಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಪ್ರಭು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT