ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನೀಟ್ ಮರು ಪರೀಕ್ಷೆಗೆ ಆಗ್ರಹ

Published 13 ಜೂನ್ 2024, 16:05 IST
Last Updated 13 ಜೂನ್ 2024, 16:05 IST
ಅಕ್ಷರ ಗಾತ್ರ

ಶೃಂಗೇರಿ: 2024ನೇ ಸಾಲಿನ ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಶಂಕೆ ಇದ್ದು, ಉನ್ನತ ಮಟ್ಟದ ತನಿಖೆ ನಡೆಸಬೇಕು ಹಾಗೂ ಈಗ ನಡೆದಿರುವ ಪರೀಕ್ಷೆ ರದ್ದುಪಡಿಸಿ ಮರು ಪರೀಕ್ಷೆ ಮಾಡಬೇಕು ಎಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ತಹಶೀಲ್ದಾರ್‌ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿತು.

ಸಂಘಟನೆಯ ಕ್ಷೇತ್ರಾಧ್ಯಕ್ಷ ಆಶ್ರಯ್ ಗೌಡ ಮಾತನಾಡಿ, ನೀಟ್ ಪರೀಕ್ಷೆಯ ಫಲಿತಾಂಶ ವಿವಾದಗಳಿಂದ ಕೂಡಿದ್ದು, ಭಾರಿ ಅಕ್ರಮ ನಡೆದಿರುವ ಸಾಧ್ಯತೆಯಿದೆ ಎಂದು ದೂರಿದರು.

ಪದಾಧಿಕಾರಿ ಸಂಕೇತ್ ಕೂಡ್ಲುಮಕ್ಕಿ ಮಾತನಾಡಿ, `ಒಟ್ಟು 67 ವಿದ್ಯಾರ್ಥಿಗಳು ಮೊದಲ ರ‍್ಯಾಂಕ್‌ ಬಂದಿರುವುದು ಹಾಗೂ ಒಂದೇ ಪರೀಕ್ಷಾ ಕೇಂದ್ರದ 8 ವಿದ್ಯಾರ್ಥಿಗಳು ಪ್ರಥಮ ರ‍್ಯಾಂಕ್‌ ಗಳಿಸಿರುವುದು  ಅಕ್ರಮ ನಡೆದಿರುವುದಕ್ಕೆ ಸಾಕ್ಷಿಯಾಗಿದೆ. ನೀಟ್ ಫಲಿತಾಂಶದ ನಂತರ ದೇಶದ ಕೆಲವಡೆ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದಾರೆ. ಯುವ ವಿದ್ಯಾರ್ಥಿಗಳೂ ಪ್ರಾಣ ಕಳೆದು ಕೊಳ್ಳದಂತೆ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು' ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಧನುಷ್, ಚಂದನ್ ಮತ್ತು ಎನ್‍ಎಸ್‍ಯುಐ ಪದಾಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT