ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಾಸಕ ಭರತ್ ಶೆಟ್ಟಿಗೆ ಕಠಿಣ ಶಿಕ್ಷೆಯಾಗಲಿ: ಎಂ.ಎಸ್.ಅನಂತ್

Published 11 ಜುಲೈ 2024, 14:13 IST
Last Updated 11 ಜುಲೈ 2024, 14:13 IST
ಅಕ್ಷರ ಗಾತ್ರ

ಮೂಡಿಗೆರೆ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‍ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಶಾಸಕ ಭರತ್ ಶೆಟ್ಟಿ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಕಾಂಗ್ರೆಸ್ ಜಿಲ್ಲಾ ವಕ್ತಾರ ಎಂ.ಎಸ್.ಅನಂತ್ ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಭರತ್ ಶೆಟ್ಟಿಯಂಥ ಬಿಜೆಪಿಯ ನಾಯಕರ ಹೇಳಿಕೆಗಳಿಂದ ದೇಶದ ಯುವಜನರು ಪ್ರಚೋದನೆಗೆ ಒಳಗಾಗಿ ಹಿಂಸಾತ್ಮಕ ಕೃತ್ಯಗಳಿಗೆ ಕೈ ಹಾಕುತ್ತಿದ್ದಾರೆ. ಸಂಸತ್ ಮೇಲೆ ದಾಳಿ ಮಾಡಿದ ಘಟನೆಗೆ ಇಂಥ ಹೇಳಿಕೆಗಳೇ ಕಾರಣ ಎಂದು ದೂರಿದರು.

ರಾಹುಲ್‍ಗಾಂಧಿ ವಿರುದ್ಧ ಶಾಸಕ ಭರತ್ ಶೆಟ್ಟಿ ನೀಡಿರುವ ಹೇಳಿಕೆ ಖಂಡನೀಯ. ಇದು ಕರಾವಳಿಯ ಮುಗ್ಧ ಯುವಜನರನ್ನು ಹಾದಿ ತಪ್ಪಿಸಲು, ಗಲಭೆ ಸೃಷ್ಟಿಸಲು ಉದ್ದೇಶಪೂರ್ವಕವಾಗಿ ನೀಡಿದ ಹೇಳಿಕೆಯಾಗಿದೆ. ಶಾಸಕನನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT