ತರೀಕೆರೆ: ಜಿಲ್ಲಾ ಮಟ್ಟದಲ್ಲಿ ಸಹಕಾರ ಸಂಘ ರಚಿಸಿ ಆ ಸಹಕಾರ ಸಂಘಗಳ ಮೂಲಕ ಜಿಲ್ಲೆಯ ಹೊರಗುತ್ತಿಗೆ ನೌಕರರಿಗೆ ವೇತನ ವಿತರಿಸಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಘಟಕದ ಉಪಾಧ್ಯಕ್ಷ ಎಂ. ಮಹೇಶ್ ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ವಿವಿಧ ಇಲಾಖೆಯ ಹೊರಗುತ್ತಿಗೆ ನೌಕರರು ಪ್ರತಿ ಜಿಲ್ಲೆಯಲ್ಲಿ ಸುಮಾರು 1,500 ಇದ್ದು, ಅವರಿಗೆ ಸಂಬಳ ಕೊಡಲು ವಿವಿಧ ಏಜೆನ್ಸಿಗಳನ್ನು ನೇಮಿಸಲಾಗಿದೆ. ಇದು ದುಡಿಯುವ ವರ್ಗಕ್ಕೆ ಅನ್ಯಾಯ ಮಾಡಿದಂತಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಸಂಪುಟದ ಸದಸ್ಯರು ಇದ್ದರೂ ಶ್ರಮಜೀವಿಗಳಿಗೆ ಮೋಸವಾಗುತ್ತಿದೆ. ಇದು ಸರಿಯಲ್ಲ ಎಂದರು.

ಜಿಲ್ಲೆಯಲ್ಲಿಯೂ ಸಹಕಾರ ಸಂಘ ಸ್ಥಾಪಿಸಿ ಹೊರಗುತ್ತಿಗೆ ನೌಕರರಿಗೆ ವೇತನ ಮತ್ತು ಇತರ ಸೌಲಭ್ಯಗಳನ್ನು ಪಾವತಿಸಿಕೊಡುವಂತೆ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಲ್.ಮಂಜು ನಾಲ್ಕು ತಿಂಗಳ ಹಿಂದೆ ಮನವಿ ಸಲ್ಲಿಸಿದ್ದಾರೆ. ಆದರೆ ಇದುವರೆಗೂ ಈ ಬಗ್ಗೆ ಕ್ರಮವಹಿಸಿಲ್ಲ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.