ಶನಿವಾರ, ಡಿಸೆಂಬರ್ 3, 2022
19 °C
ಮೂಡಿಗೆರೆ: ಸಹಕಾರ ಸಪ್ತಾಹ

ಸಹಕಾರ ಸೌಲಭ್ಯ ಸದ್ಬಳಕೆ ಮಾಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೂಡಿಗೆರೆ: ಸಹಕಾರ ಸಂಘದಿಂದ ಕಡಿಮೆ ದರದಲ್ಲಿ ಸಿಗುವ ಸಾಲ ಸೌಲಭ್ಯವನ್ನು ಪ್ರತಿಯೊಬ್ಬ ರೈತರು ಬಳಸಿಕೊಂಡು ಆರ್ಥಿಕವಾಗಿ ಮುಂದೆ ಬರಬೇಕು ಎಂದು ಸಹಕಾರ ಮಹಾ ಮಂಡಳಿಯ ಅಭಿವೃದ್ಧಿ ಅಧಿಕಾರಿ ಗುರುಮೂರ್ತಿ ಹೇಳಿದರು.

ಪಟ್ಟಣದಲ್ಲಿ ಬುಧವಾರ ವಿವಿಧ ಸಹಕಾರ ಸಂಘಗಳ ಸಹಯೋಗದಲ್ಲಿ ಏರ್ಪಡಿಸಿದ್ದ ಅಖಿಲ ಭಾರತ ಸಹಕಾರ ಸಪ್ತಾಹದ ಸಹಕಾರ ಮಾರುಕಟ್ಟೆ, ಗ್ರಾಹಕ, ರೂಪಾಂತರ ಮತ್ತು ಮೌಲ್ಯವರ್ಧನೆ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸರ್ಕಾರ ರೈತರಿಗೆ ₹3 ಲಕ್ಷಗಳವರೆಗೆ ಸಹಕಾರ ಸಂಘಗಳ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುತ್ತದೆ. ಅದನ್ನು ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡುವ ಮೂಲಕ ಸಹಕಾರ ಸಂಘಗಳ ಏಳಿಗೆಗೆ ಶ್ರಮಿಸಬೇಕು’ ಎಂದು ಮನವಿ ಮಾಡಿದರು.

ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಡಾ.ಜಿ.ಎಸ್ ಮಹಾಬಲ ಮಾತನಾಡಿ, ‘ಸಹಕಾರ ಸಂಘಗಳ ಒಕ್ಕೂಟದಿಂದ ಸಂಘಗಳು ಸುಸ್ಥಿರವಾಗಿ ನಡೆಯಲು ಕಾರಣವಾಗಿದೆ. ಎಲ್ಲ ಸಂಘಗಳು ಆಧುನಿಕ ತಂತ್ರಜ್ಞಾನ ಬಳಸಿಕೊಂಡು ವ್ಯವಹಾರವನ್ನು ಪಾರದರ್ಶಕವಾಗಿ ನಿರ್ವಹಿಸಬೇಕು. ಆಗ ಮಾತ್ರ ಸಹಕಾರ ಸಂಘಗಳಲ್ಲಿ ಪ್ರಗತಿ ಕಾಣಲು ಸಾಧ್ಯವಾಗುತ್ತದೆ’ ಎಂದರು.

ಕಾಂಗ್ರೆಸ್ ಮುಖಂಡರಾದ ಮೋಟಮ್ಮ, ಜೆಡಿಎಸ್ ಮುಖಂಡ ಬಿ.ಬಿ ನಿಂಗಯ್ಯ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಿ.ಬಿ ಧರ್ಮಪಾಲ್, ಹಳೆಮೂಡಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಾನಂದ್, ಕರ್ನಾಟಕ ರಾಜ್ಯ ಲ್ಯಾಂಪ್ಸ್ ಸಹಕಾರ ಮಹಾಮಂಡಳಿ ಅಧ್ಯಕ್ಷ ಬಿ.ಎನ್ ಮುತ್ತಪ್ಪ, ಸಹಕಾರ ರತ್ನ ಪುರಸ್ಕೃತ ಹಳಸೆ ಶಿವಣ್ಣ, ಬೆಳೆಗಾರ ಸಂಘದ ಅಧ್ಯಕ್ಷ ಬಾಲಕೃಷ್ಣ, ಜಿ.ಕೆ ದಿವಾಕರ್, ಒ.ಜಿ ರವಿ, ಅರೆಕುಡಿಗೆ ಶಿವಣ್ಣ, ಎನ್.ಜೆ ಜಯರಾಂ, ಬಿ.ಎಲ್ ಸಂದೀಪ್, ಎಚ್.ಎಂ ರವಿ, ಎಚ್.ಜಿ ಉತ್ತಮ್‍ಕುಮಾರ್, ಕೆ.ಬಿ ಶಿವರಾಜ್, ಕೆ.ಬಿ ಗೋಪಾಲಗೌಡ, ಎಚ್.ಬಿ ಸರೋಜಾ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು