ಭಾನುವಾರ, ಏಪ್ರಿಲ್ 2, 2023
33 °C

‘ಸರ್ಜಾ ಹನುಮಪ್ಪ ನಾಯಕ ಪುತ್ಥಳಿ ನಿರ್ಮಾಣಕ್ಕೆ ಬದ್ಧ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತರೀಕೆರೆ: ಪಟ್ಟಣದ ಸರ್ಜಾ ಹನುಮಪ್ಪ ನಾಯಕ ಬಸ್ ನಿಲ್ದಾಣದ ಆವರಣದಲ್ಲಿ ಪಟ್ಟಣದ ಅಭಿವೃದ್ದಿಗೆ ಶ್ರಮಿಸಿದ ಸರ್ಜಾ ಹನುಮಪ್ಪ ನಾಯಕನ ಪುತ್ಥಳಿ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಡಿ.ಎಸ್.ಸುರೇಶ್ ಹೇಳಿದರು.

ಇಲ್ಲಿ ತಾಲ್ಲೂಕು ಆಡಳಿತ ಆಯೋಜಿಸಿದ್ದ ಮಹರ್ಷೀ ವಾಲ್ಮೀಕಿ ಜಯಂತಿಯಲ್ಲಿ ಅವರು ಮಾತನಾಡಿರು.

ರಾಜ್ಯ ಸರ್ಕಾರ ಪರಿಶಿಷ್ಟರ ಮೀಸಲಾತಿ ಹೆಚ್ಚಳ ಮಾಡಿದೆ ಎಂದರು. ತಹಶೀಲ್ದಾರ್ ಪೂರ್ಣಿಮಾ ಮಾತನಾಡಿ ಸಾಮಾನ್ಯ ವ್ಯಕ್ತಿಯಿಂದ ವಾಲ್ಮೀಕಿ ಮಹರ್ಷಿಯಾಗಿದ್ದಾರೆ. ಅವರ ಆದರ್ಶಗಳು ಅನುಕರಣೀಯ ಎಂದರು.

ಪುರಸಭೆ ಅಧ್ಯಕ್ಷೆ ಕಮಲ ರಾಜೇಂದ್ರ, ಸ್ಥಾಯಿ ಸಮಿತಿ ಅಧ್ಯಕ್ಷ ದಾದಾಪೀರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಯೋಗೀಶ್ ಮಾತನಾಡಿದರು. ಶಿಕ್ಷಕ ಚೇತನ್ ಗೌಡ ಉಪನ್ಯಾಸ ನೀಡಿದರು. ಪುರಸಭೆ ಮುಖ್ಯಧಿಕಾರಿ ಮಹಾಂತೇಶ್,   ಪುರಸಭೆ ಸದಸ್ಯೆ ಪಾರ್ವತಮ್ಮ, ಉಪ ತಹಶೀಲ್ದಾರ್ ಗೋವಿಂದಪ್ಪ, ಸಮಾಜ ಕಲ್ಯಾಣ ಇಲಾಖೆಯ ಮಂಜುನಾಥ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಟಿ.ಎಸ್.ಗಣೇಶ್, ತೋಟಗಾರಿಕೆ ಸಹಾಯಕ ನಿರ್ದೇಶಕ ಯತಿರಾಜ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು