ಮುಡಿಪು: ಆಧುನಿಕ ಕಾಲಘಟ್ಟದಲ್ಲಿ ಮಹಿಳೆಯರಿಗೆ ಎಲ್ಲಾ ಕ್ಷೇತ್ರದಲ್ಲಿಯೂ ಅವಕಾಶ ಪ್ರಾತಿನಿಧ್ಯ ದೊರೆತರೂ ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ಹೆಣ್ಮಕ್ಕಳ ಅಭಿವೃದ್ಧಿ, ಬೆಳವಣಿಗೆಯಲ್ಲಿ ಶಿಕ್ಷಣದ ಪಾತ್ರ ಮಹತ್ತರವಾದುದು ಎಂದು ಮಂಗಳೂರು ವಿವಿ ಕುಲಸಚಿವ ಪ್ರೊ.ಕಿಶೋರ್ ಕುಮಾರ್ ಸಿ.ಕೆ. ಹೇಳಿದರು.

ಅಂತರರಾಷ್ಟ್ರೀಯ ಮಹಿಳಾ ದೌರ್ಜನ್ಯ ನಿರ್ಮೂಲನೆ ದಿನಾಚರಣೆಯ ಅಂಗವಾಗಿ ಅಸೈಗೋಳಿಯಲ್ಲಿ ಮಂಗಳೂರು ವಿವಿಯ ಮಹಿಳಾ ಅಧ್ಯಯನ ಕೇಂದ್ರ, ಲಯನ್ಸ್ ಕ್ಲಬ್ ಮಂಗಳಗಂಗೋತ್ರಿ, ಕೊಣಾಜೆ ಗ್ರಾಮ ಪಂಚಾಯತಿ, ರೋಟರಿ ಕ್ಲಬ್ ದೇರಳಕಟ್ಟೆ, ಡೀಡ್ಸ್ ಮಂಗಳೂರು ಇವರ ಸಹಯೋಗದಲ್ಲಿ ನಡೆದ ರಾಷ್ಟ್ರೀಯ ಏಕತಾ ಸಪ್ತಾಹ- ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಣತೆ ವಹಿಸಿ ಮಾತನಾಡಿದರು.

ಮಹಿಳೆಯರ ಸಮಸ್ಯೆಗಳು ಕಡಿಮೆಯಾದರೆ ಇಡೀ ಸಮಾಜದ ಸಮಸ್ಯೆಗಳು ಕಡಿಮೆಯಾದಂತೆ. ನಮ್ಮ ವ್ಯಕ್ತಿತ್ವವನ್ನು ಸಮಾಜಮುಖಿಯಾಗಿ ಬೆಳೆಸಿಕೊಂಡು ಸಮಾನತೆಯ ಸಮಾಜವನ್ನು ಕಟ್ಟೋಣ ಎಂದರು.

ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕಿ ಡಾ.ಅನಿತಾ ರವಿಶಂಕರ್ ಉಪನ್ಯಾಸ ನೀಡಿ, ದೇಶದ ಅಭಿವೃದ್ಧಿಯಲ್ಲಿ ಲಿಂಗತ್ಚ ಸಮಾನತೆಯು ಪ್ರಮುಖ ಪಾತ್ರವಹಿಸುತ್ತದೆ. ಲಿಂಗತ್ವ ಅಸಮಾನತೆಯಿಂದಲೇ ಇಂದು ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯ ಮುಂದುವರಿಯುತ್ತಿದೆ. ಮಹಿಳೆಯರ ಸಮಸ್ಯೆ ಮಹಿಳೆಯರದ್ದು ಮಾತ್ರ ಅಲ್ಲ, ಆ ಸಮಸ್ಯೆ ಇಡೀ ಸಮಾಜದ್ದಾಗಿದೆ ಎಂದರು.

ಕೊಣಾಜೆ ಪಂಚಾಯಿತಿ ಅಧ್ಯಕ್ಷೆ ಚಂಚಲಾಕ್ಷಿ ಮಾತನಾಡಿ, ಶಿಕ್ಷಣ ಸಂಸ್ಥೆಗಳಲ್ಲಿ ಲೈಂಗಿಕ ದೌರ್ಜನ್ಯ ಹೆಚ್ಚಾತ್ತಿರುವುದು ಆತಂಕಕಾರಿ ಎಂದರು.

ಲಯನ್ಸ್ ಕ್ಲಬ್ ಅಧ್ಯಕ್ಷೆ ಅನುಸೂಯಾ ಆರ್. ಶೆಟ್ಟಿ, ವಿದ್ಯಾರತ್ನ ಶಾಲೆಯ ಸೌಮ್ಯಾ ಆರ್. ಶೆಟ್ಟಿ, ಕೊಣಾಜೆ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಯೋಗೇಶ್ವರ್ ಪಿ. ಇದ್ದರು.

ಪ್ರೊ.ರವಿಶಂಕರ್ ಸ್ವಾಗತಿಸಿದರು. ಲಯನ್ಸ್ ಕ್ಲಬ್‌ನ ಪ್ರಸಾದ್ ರೈ ಕಲ್ಲಿಮಾರ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.