ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯರ ಮೇಲಿನ ದೌರ್ಜನ್ಯ ಖಂಡನೀಯ: ಶೃತಿ

Published 17 ಮೇ 2024, 14:50 IST
Last Updated 17 ಮೇ 2024, 14:50 IST
ಅಕ್ಷರ ಗಾತ್ರ

ಕೊಪ್ಪ: ‘ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ಕೊಲೆ ಪ್ರಕರಣಗಳು ಹೆಚ್ಚಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡನೀಯ’ ಎಂದು ಗ್ರಾಮಾಂತರ ಗ್ರಾಮ ಪಂಚಾಯಿತಿ ಸದಸ್ಯೆ ಶೃತಿ ರೋಹಿತ್ ಹೇಳಿದರು.

‘ರಾಜ್ಯ ಸರ್ಕಾರದ ವೈಫಲ್ಯ, ಪೊಲೀಸ್ ಇಲಾಖೆಯ ಅಸಡ್ಡೆ ಹಾಗೂ ನಿರ್ಲಕ್ಷ್ಯತೆ ಹೆಚ್ಚಾಗಿ ಕಾಣುತ್ತಿದೆ. ಹುಬ್ಬಳಿಯ ನೇಹಾ ಹಿರೇಮಠ್ ಹತ್ಯೆಯ ಬೆನ್ನಲ್ಲೇ  ಹುಬ್ಬಳಿಯಲ್ಲೇ ಅಂಜಲಿಯ ಹತ್ಯೆ ಹಾಗೂ ಕೊಡಗಿನ ಸೋಮವಾರಪೇಟೆಯ 16 ವರ್ಷದ ಅಪ್ರಾಪ್ತೆ ಮೀನಾಳ ಹತ್ಯೆ ಇಡೀ ರಾಜ್ಯವೇ ಬೆಚ್ಚಿ ಬೀಳುವಂತೆ ಮಾಡಿದೆ. ರಾಜ್ಯ ಸರ್ಕಾರ ಈ ಕೂಡಲೇ ಆರೋಪಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT