‘ಸ್ವಲ್ಪ ಹೆಚ್ಚಾಗಿದೆ: ಭಯ ಬೇಡ’
‘ಜಿಲ್ಲೆಯಲ್ಲಿ ಶೀತಗಾಳಿಯಿಂದ ಮಕ್ಕಳಲ್ಲಿ ಜ್ವರ ಶೀತ ಕೆಮ್ಮು ಸ್ವಲ್ಪ ಹೆಚ್ಚಾಗಿದೆ. ಗಾಬರಿಯಾಗುವ ಸ್ಥಿತಿ ಇಲ್ಲ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥಬಾಬು ತಿಳಿಸಿದರು. ‘ಜ್ವರ ಹೆಚ್ಚಾಗಿರುವುದು ಮತ್ತು ಆಸ್ಪತ್ರೆಗಳಲ್ಲಿ ಸಿಗುತ್ತಿರುವ ಚಿಕಿತ್ಸೆ ಬಗ್ಗೆ ಕಣ್ಗಾವಲು ವಹಿಸಲಾಗಿದೆ. ಜ್ವರ ಬರುತ್ತದೆ ಹೋಗುತ್ತದೆ. ವಿಶೇಷ ಏನು ಇಲ್ಲ. ಬೇರೆ ಸಂದರ್ಭದಲ್ಲಿ ಜ್ವರ ಬಂದಾಗ ವಹಿಸುವ ಎಚ್ಚರಿಕೆಗಳನ್ನು ವಹಿಸಿದರೆ ಸಾಕು’ ಎಂದರು.