ಬೆಳ್ತಂಗಡಿ: ‘ತಾಲ್ಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಪದಗ್ರಹಣ, ಆಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮೇ 25ರಂದು ಬೆಳ್ತಂಗಡಿಯ ಸಂತೆಕಟ್ಟೆ ಬಳಿಯ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ನಡೆಯಲಿದೆ' ಎಂದು ಟ್ರಸ್ಟ್ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ‘ಅಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ಕಾವೂರು ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸುವರು. ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಮಂಗಳೂರು ಘಟಕದ ಅಧ್ಯಕ್ಷ ಡಿ.ಬಿ. ಬಾಲಕೃಷ್ಣ ಅಧ್ಯಕ್ಷತೆ ವಹಿಸುವರು’ ಎಂದರು.

ಶಾಸಕರಾದ ಸಿ.ಎನ್. ಬಾಲಕೃಷ್ಣ, ಟಿ.ಡಿ. ರಾಜೇಗೌಡ, ಮಾಜಿ ಸಚಿವ ಗಂಗಾಧರ ಗೌಡ, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ಸಂಜೀವ ಮಠಂದೂರು, ಉಮಾಪತಿ ಶ್ರೀನಿವಾಸ ಗೌಡ ಸೇರಿದಂತೆ ರಾಜ್ಯದ ಅನೇಕ ಒಕ್ಕಲಿಗ ಮುಖಂಡರು ಭಾಗವಹಿಸುವರು ಎಂದರು.

ಗೌರವ ಅಧ್ಯಕ್ಷ ರಂಜನ್ ಜಿ. ಗೌಡ, ವಿಜಯ ಗೌಡ ವೇಣೂರು, ಕಾರ್ಯಾಧ್ಯಕ್ಷ ಶ್ರೀನಿವಾಸ ಗೌಡ ಬೆಳಾಲು, ಕಾರ್ಯದರ್ಶಿ ಭರತ್ ಗೌಡ ಬಂಗಾಡಿ, ಕೋಶಾಧಿಕಾರಿ ಸೂರಜ್ ಗೌಡ ವಳಂಬ್ರ, ಸ್ಥಾಪಕ ಟ್ರಸ್ಟಿ ನವೀನ್ ಗೌಡ ಬಿ.ಕೆ, ವಸಂತ ಮರಕಡ, ರಾಜೇಶ್ ಕೆ. ಗೌಡ, ದಿನೇಶ್ ಗೌಡ, ಸುಂದರ ಗೌಡ ಹತ್ಯಡ್ಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.