ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೃಂಗೇರಿ- ವಾಲಿಬಾಲ್: ಮಾಗುಂಡಿ ತಂಡ ಪ್ರಥಮ

ಶೃಂಗೇರಿ ಕ್ಷೇತ್ರಮಟ್ಟದ ಆಹ್ವಾನಿತ ತಂಡಗಳ ಹೊನಲು ಬೆಳಕಿನ ಟೂರ್ನಿ
Last Updated 3 ಜನವರಿ 2023, 5:09 IST
ಅಕ್ಷರ ಗಾತ್ರ

ನರಸಿಂಹರಾಜಪುರ: ಕ್ರೀಡಾಕೂಟಗಳು ಪರಸ್ಪರ ಸಂಬಂಧ ಬೆಸೆಯಲು ಸಹಕಾರಿಯಾಗಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

ಇಲ್ಲಿನ ಪ್ರವಾಸಿ ಮಂದಿರದ ವೃತ್ತದ ಬಳಿ ಭಾನುವಾರ ಆಯೋಜಿಸಿದ್ದ ಶೃಂಗೇರಿ ಕ್ಷೇತ್ರಮಟ್ಟದ ಆಹ್ವಾನಿತ ತಂಡಗಳ ಹೊನಲು ಬೆಳಕಿನ ನ್ಯೂ ಇಯರ್ ವಾಲಿಬಾಲ್ ಟೂರ್ನಿಗೆ ಚಾಲನೆ ನೀಡಿ ಮಾತನಾಡಿದರು.

ಜಾತಿ, ಮತ, ಧರ್ಮದ ಭೇದವಿಲ್ಲದೆ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ. ಕ್ರೀಡೆಯಿಂದ ಆರೋಗ್ಯ ವೃದ್ಧಿಯಾಗುತ್ತದೆ. ಗ್ರಾಮೀಣ ಭಾಗದಲ್ಲಿರುವ ಪ್ರತಿಭಾನ್ವಿತ ಪ್ರತಿಭೆಗಳು ಹೊರಹೊಮ್ಮಲು ಕ್ರೀಡಾಕೂಟ ಸಹಕಾರಿ ಯಾಗಿದೆ. ಯುವಕರು ಸದಾ ಕ್ರೀಯಾಶೀಲರಾಗಲು ಕ್ರೀಡೆ ಸಹಕಾರಿಯಾಗಿದೆ ಎಂದರು. ಪಟ್ಟಣದ ವ್ಯಾಪ್ತಿಯ ನೀರಿನ ಟ್ಯಾಂಕ್ ವೃತ್ತಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ಎಂದು ನಾಮಕರಣ ಮಾಡಿರುವುದು ಪಟ್ಟಣ ಪಂಚಾಯಿತಿಯ ಗೌರವ ಹೆಚ್ಚಿಸಿದೆ ಎಂದರು.

ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಮಾತನಾಡಿ, ಪಟ್ಟಣದ ಪ್ರವಾಸಿ ಮಂದಿರ ಬಳಿ ದೇವಸ್ಥಾನ, ಮಸೀದಿ, ಚರ್ಚ್ ಗಳು ಇದ್ದು ಇಲ್ಲಿ ಸದಾ ಧಾರ್ಮಿಕ ಚಟುವಟಿಕೆಗಳು ಹಾಗೂ ಕ್ರೀಡಾಕೂಟಗಳು ನಡೆಯುತ್ತದೆ. ಕೋಮು ಸೌಹಾರ್ದತೆ ಕಾಪಾಡಿಕೊಂಡಿರುವುದು ಯುವಕರ ಹೆಗ್ಗಳಿಕೆಯಾಗಿದೆ ಎಂದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದಾ, ಅಧ್ಯಕ್ಷತೆ ವಹಿಸಿದ್ದ ನ್ಯೂ ಇಯರ್ ಕಪ್ ಆಯೋಜನೆಯ ಇರ್ಫಾನ್ ಮಾತನಾಡಿದರು.

ತಾಲ್ಲೂಕು ಕಾಂಗ್ರೆಸ್ ಘಟಕದ ಅಧ್ಯಕ್ಷ ಗೇರುಬೈಲು ನಟರಾಜ್, ನಗರ ಘಟಕದ ಅಧ್ಯಕ್ಷ ಬಿ.ವಿ.ಉಪೇಂದ್ರ, ಹೋಬಳಿ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ದೇವಂತಗೌಡ, ಗ್ರಾಮ ಪಂಚಾಯಿತಿ ಸದಸ್ಯ ಕೆ.ವಿ.ಸಾಜು, ತಾಲ್ಲೂಕು ಯುವ ಜೆಡಿಎಸ್ ಅಧ್ಯಕ್ಷ ಮೇಘರ್ಷ, ಜೀಶಾನ್, ಶ್ರೀಧರ್ ಇದ್ದರು.

ಹಿರಿಯ ವಾಲಿಬಾಲ್ ಆಟಗಾರ ರಿಯಾಜ್ ಅವರನ್ನು ಸನ್ಮಾನಿಸಲಾಯಿತು.

ಒಟ್ಟು 10 ತಂಡಗಳು ಭಾಗವಹಿಸಿದ್ದವು ಮಾಗುಂಡಿ ತಂಡ ಪ್ರಥಮ (₹20,000), ಯುನೆಟೆಡ್ ಸ್ಪೋರ್ಟ್ಸ್ ಕ್ಲಬ್ ದ್ವಿತೀಯ(₹10,000) ಸ್ಥಾನ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT