ಶುಕ್ರವಾರ, ಮಾರ್ಚ್ 31, 2023
22 °C
ಬಣಕಲ್ ವಿದ್ಯುತ್ ಉಪಕೇಂದ್ರ ಉದ್ಘಾಟನೆಯಲ್ಲಿ ಇಂಧನ ಸಚಿವ ವಿ.ಸುನಿಲ್ ಕುಮಾರ್

ಗುಣಮಟ್ಟದ ವಿದ್ಯುತ್ ನೀಡಲು ಬದ್ಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪ್ರಜಾವಾಣಿ ವಾರ್ತೆ

ಕೊಟ್ಟಿಗೆಹಾರ: ‘ರಾಜ್ಯದಲ್ಲಿ ನಿರಂತರ, ಗುಣಮಟ್ಟದ ವಿದ್ಯುತ್ ನೀಡಲು ಸರ್ಕಾರ ಬದ್ಧತೆಯಿಂದ ಕಾರ್ಯ ನಿರ್ವಹಿಸುತ್ತಿದೆ’ ಎಂದು ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು.

ಬಣಕಲ್‍ನಲ್ಲಿ 33/11 ಕೆವಿ ವಿದ್ಯುತ್ ಉಪಕೇಂದ್ರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಬೆಳಕು ಯೋಜನೆಯ ಮೂಲಕ ವಿದ್ಯುತ್ ರಹಿತ ಮನೆಗಳಿಗೆ ವಿದ್ಯುತ್ ನೀಡುವ ಕಾರ್ಯ ಮಾಡಲಾಗಿದೆ. 1 ವರ್ಷದ ಅವಧಿಯಲ್ಲಿ 2.5 ಲಕ್ಷ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲಾಗಿದೆ. ನ.1ರಿಂದ 15ರವರೆಗೆ ಪರಿವರ್ತಕ ನಿರ್ವಹಣಾ ಅಭಿಯಾನ ಕೈಗೊಳ್ಳಲಾಗಿದೆ. ವ್ಯವಸ್ಥಾಪಕ ನಿರ್ದೇಶಕರಿಂದ ಹಿಡಿದು ಕೆಳಹಂತದ ಅಧಿಕಾರಿಗಳು ಪ್ರತಿ ಪರಿವರ್ತಕ ಪರಿಶೀಲಿಸಲಿದ್ದಾರೆ’ ಎಂದರು. 

‘ಕಾಫಿ ಬೆಳೆಗಾರರಿಗೆ 10 ಎಚ್‍ಪಿ ವಿದ್ಯುತ್ ಪಂಪ್‍ಸೆಟ್‍ಗಳಿಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಎಲ್ಲರಿಗೂ ನೀಡಬೇಕು ಎಂಬ ಬೇಡಿಕೆ ಬಗ್ಗೆ ಪರಿಶೀಲಿಸಲಾಗುವುದು. ರೈತರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ 1 ವರ್ಷಕ್ಕೆ 16 ಸಾವಿರ ಕೋಟಿ ಸಬ್ಸಿಡಿ ನೀಡಲಾಗುತ್ತಿದೆ’ ಎಂದರು.

ವಿಧಾನ ಪರಿಷತ್ ಸದಸ್ಯ ಎಂ.ಕೆ. ಪ್ರಾಣೇಶ್ ಮಾತನಾಡಿ, ‘ಸರ್ಕಾರ ರೈತರ, ಕಾಫಿ ಬೆಳೆಗಾರರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಾ ಬಂದಿದೆ’ ಎಂದರು.

ಬಣಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ, ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಕುಮಾರ್ ಮಿಶ್ರಾ, ತಾಂತ್ರಿಕ ನಿರ್ದೇಶಕ ಡಿ. ಪದ್ಮಾವತಿ, ಮೆಸ್ಕಾಂ ಮುಖ್ಯ ಎಂಜಿನಿಯರ್ ಎಚ್.ಬಸಪ್ಪ, ಅಧೀಕ್ಷಕ ಎಂಜಿನಿಯರ್ ಬಿ. ಸೋಮಶೇಖರ್,  ಮೆಸ್ಕಾಂ ಕಿರಿಯ ಎಂಜಿನಿಯರ್ ಎಸ್.ಕೆ. ಮಂಜುನಾಥ್, ತಹಶೀಲ್ದಾರ್ ಎಂ.ಎ. ನಾಗರಾಜ್, ತರುವೆ ಗ್ರಾ.ಪಂ ಅಧ್ಯಕ್ಷ ಬಿ.ಎಂ. ಸತೀಶ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಜೆ.ಎಸ್. ರಘು ಜನ್ನಾಪುರ, ಹೋಬಳಿ ಅಧ್ಯಕ್ಷ ಅನೂಪ್ ಕುಮಾರ್, ಬಿಜೆಪಿ ಮುಖಂಡರಾದ ಬಿ.ಎಂ. ಭರತ್, ಹಳಸೆ ಶಿವಣ್ಣ, ಟಿ.ಎಂ. ಗಜೇಂದ್ರ, ಪರೀಕ್ಷಿತ್ ಜಾವಳಿ, ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್. ಬಾಲಕೃಷ್ಣ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು