ಕೊಟ್ಟಿಗೆಹಾರ: ಬಣಕಲ್, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ಸುತ್ತಮುತ್ತ ಬುಧವಾರ ರಾತ್ರಿ ಧಾರಾಕಾರ ಮಳೆ ಸುರಿದಿದೆ.
ಆದರೆ, ಅತಿಯಾದ ಮಳೆ ರಾತ್ರಿ ಬಂದರೂ ಧಗೆಯ ವಾತಾವರಣ ನಿರ್ಮಾಣವಾಗಿತ್ತು. ಬುಧವಾರ ಸಂಜೆ 5.30ಕ್ಕೆ ಆರಂಭವಾದ ಧಾರಾಕಾರ ಮಳೆಯಿಂದ ಕೊಟ್ಟಿಗೆಹಾರ ಸುತ್ತಮುತ್ತ ವಾತಾವರಣ ಮಂಜು ಮುಸುಕಿದ್ದು, ವಾಹನ ಸವಾರರು ತೊಂದರೆ ಅನುಭವಿಸುವಂತಾಯಿತು.
ಮಳೆ ಬಿಡುವು ಕೊಟ್ಟಿದ್ದರಿಂದ ನದಿಗಳಲ್ಲಿ ನೀರಿನ ಮಟ್ಟ ಇಳಿಕೆ ಕಂಡಿತ್ತು. ಆದರೆ, ಬುಧವಾರ ಮತ್ತೇ ಕಾಫಿನಾಡಿನಲ್ಲಿ ವರುಣನ ಆರ್ಭಟ ಆರಂಭವಾಗಿದೆ.