ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಂಸದರು, ಶಾಸಕರು ಒಗ್ಗಟ್ಟಾಗಿ ಹೋರಾಡಲಿ: ಅನಿಲ್ ಹೊಸಕೊಪ್ಪ

Published 11 ಆಗಸ್ಟ್ 2024, 13:55 IST
Last Updated 11 ಆಗಸ್ಟ್ 2024, 13:55 IST
ಅಕ್ಷರ ಗಾತ್ರ

ಶೃಂಗೇರಿ: ‘ಕೇಂದ್ರ ಸರ್ಕಾರ ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಅರಣ್ಯ ಪ್ರದೇಶ ಎಂದು ಘೋಷಿಸಲು ಕರಡು ಪ್ರತಿ ಸಿದ್ಧಪಡಿಸಿದ್ದು ಮತ್ತೆ ಮಲೆನಾಡಿಗರು ಆತಂಕಕ್ಕೆ ಸಿಲುಕಿಸಿದ್ದಾರೆ' ಎಂದು ಮಲೆನಾಡು ಮತ್ತು ಕರಾವಳಿ ಜನಪರ ಒಕ್ಕೂಟದ ರಾಜ್ಯ ಸಂಚಾಲಕ ಅನಿಲ್ ಹೊಸಕೊಪ್ಪ ಹೇಳಿದರು.

ಶೃಂಗೇರಿ ಪ್ರವಾಸಿ ಮಂದಿರದಲ್ಲಿ ಮಲೆನಾಡು ಮತ್ತು ಕರಾವಳಿ ಜನಪರ ಒಕ್ಕೂಟದ ವತಿಯಿಂದ ಭಾನುವಾರ ನಡೆದ ಮುಂದಿನ ಹೋರಾಟದ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.

‘ಅತಿವೃಷ್ಟಿಯಿಂದ ಆಗಿರುವ ಪ್ರಕೃತಿ ವಿಕೋಪಕ್ಕೆ ಮಲೆನಾಡಿನ ಜನರು ನೇರ ಹೊಣೆಯಲ್ಲ. ಅವರು ಬದುಕಿಗಾಗಿ ಮಾಡಿಕೊಂಡ ಒತ್ತುವರಿಯಿಂದ ಭೂಕುಸಿತ ಉಂಟಾಗಿಲ್ಲ, ಬದಲಿಗೆ  ಅವೈಜ್ಞಾನಿಕವಾಗಿ ನಿರ್ಮಿಸಿದ ಹೆದ್ದಾರಿ, ಅಣೆಕಟ್ಟು, ಸೇತುವೆಗಳಿಂದ ಸಮಸ್ಯೆ ಉಂಟಾಗಿದೆ’ ಎಂದು ದೂರಿದರು.


ಕ್ಷೇತ್ರ ರೈತ ಸಂಘದ ಅಧ್ಯಕ್ಷ ನವೀನ್ ಕರುವಾನೆ ಮಾತನಾಡಿ, `ಸಂಸದರಾದ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಮಲೆನಾಡಿನ ಸಮಸ್ಯೆಗಳ ಬಗ್ಗೆ ಸಂಸತ್ತಿನಲ್ಲಿ ಮಾತನಾಡಿ ಮಲೆನಾಡಿಗರಿಗೆ ನ್ಯಾಯ ದೊರಕಿಸಿ ಕೋಡಬೇಕು' ಎಂದು ಒತ್ತಾಯಿಸಿದರು.


ಸಭೆಯಲ್ಲಿ ಪದಾಧಿಕಾರಿ  ಕಣದಮನೆ ಜಗದೀಶ್, ತ್ರಿಮೂರ್ತಿ, ಕಾಳ್ಯ ಸಂತೋಷ್, ಮಂಜುನಾಥ್ ಮೂಡ್ಲು, ಗುತ್ತುಳಿಕೆ ಕೇಶವ, ರಾಜ್‍ಕುಮಾರ್ ಹೆಗ್ಡೆ, ಅವಿನಾಶ್, ಪ್ರಶಾಂತ್ ಬಂಡ್ಲಪುರ, ಆದೇಶ, ಚೇತನ್ ಹಿಂಬ್ರವಳ್ಳಿ, ಶುಭಕೃತ್ ಹೆಗ್ಡೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT