ಪತಿ–ಪತ್ನಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಹಿಂದೆಯೂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಭಾನುವಾರ ರಾತ್ರಿ ಚಂದ್ರು ಪತ್ನಿ ಸವಿತಾ (35) ಜತೆಗೆ ಜಗಳವಾಡಿ ಮಚ್ಚಿನಿಂದ ತಲೆ, ಕಿವಿ, ಹೊಟ್ಟೆ ಹಾಗೂ ಎದೆ ಭಾಗಕ್ಕೆ ಹಲ್ಲೆ ಮಾಡಿದ್ದಾನೆ. ಗಂಭಿರವಾಗಿ ಗಾಯಗೊಂಡ ಸವಿತಾ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸವಿತಾ ಅವರ ತಂದೆ ವಿಜಯ್ ಎಂಬುವರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.