ಚಿಕ್ಕಮಗಳೂರು: ತಾಲ್ಲೂಕಿನ ಹುಣಸೇಹಳ್ಳಿ ಸಮೀಪದ ಹ್ಯಾರಂಬಿಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ಹಾವೇರಿ ಜಿಲ್ಲೆಯ ಕಾರ್ಮಿಕ ಮಹಿಳೆ ಬಲಿಯಾಗಿದ್ದಾರೆ. ವಾರದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವುದರಿಂದ ಆಕ್ರೋಶಗೊಂಡಿರುವ ಸ್ಥಳೀಯರು, ಶವ ರಸ್ತೆ ಮಧ್ಯದಲ್ಲಿ ಇಟ್ಟು ಪ್ರತಿಭಟನೆ ಆರಂಭಿಸಿದ್ದಾರೆ.

ವಿಜಯನಗರ ಜಿಲ್ಲೆಯ ಕೂಡ್ಲಗಿ ಗೆದ್ದಲಗಟ್ಟೆ ಕಾಮಯ್ಯನಟ್ಟಿ ಬೋರಮ್ಮ(45) ಮೃತಪಟ್ಟವರು. ನಾಗೇಶ್ಗೌಡ ಎಂಬುವರ ತೋಟದಲ್ಲಿ ಕೆಲಸಕ್ಕೆಂದು ಕಾರ್ಮಿಕರು ಭಾನುವಾರ ಬೆಳಿಗ್ಗೆ 9ರ ಸುಮಾರಿನಲ್ಲಿ ಹೋಗಿದ್ದರು. ಬೋರಮ್ಮ ಅವರ ಮೇಲೆ ಆನೆ ದಾಳಿ ನಡೆಸಿದ ಕೂಡಲೇ ಉಳಿದ ಕಾರ್ಮಿಕರು ಅಲ್ಲಿಂದ ಓಡಿ ಹೋಗಿದ್ದಾರೆ.

ಬೋರಮ್ಮ ಸ್ಥಳದಲ್ಲೇ ಮೃತಪಟ್ಟಿದ್ದು, ಆಕ್ರೋಶಗೊಂಡ ಸ್ಥಳೀಯರು ಶವವನ್ನು ಕಡಬಗೆರೆಯಲ್ಲಿ ಇರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ಚಿಕ್ಕಮಗಳೂರು–ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಸ್ಥಳಕ್ಕೆ ಬಂದ ಅಧಿಕಾರಿಗಳು ಮತ್ತು ಶಾಸಕ ಟಿ.ಡಿ.ರಾಜೇಗೌಡ ವಿರುದ್ಧವೂ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ನಾಗೇಶ್ಗೌಡ ಅವರ ತೋಟದಲ್ಲೇ ಸೋಮವಾರ ಕೂಡ ಕಾಡಾನೆ ದಾಳಿ ನಡೆಸಿತ್ತು. ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ತಿಳವಳ್ಳಿ ಯಲ್ಲಪ್ಪ ಶೇಖಪ್ಪ ಮಾರೇಕ್ಕನವರ ಮೃತಪಟ್ಟಿದ್ದರು. ಮೂರು ದಿನಗಳಿಂದ ಕಾಡಾನೆ ಸೆರೆ ಕಾರ್ಯಾಚರಣೆ ನಡೆಸುತ್ತಿರುವ ಅರಣ್ಯ ಇಲಾಖೆ, ಕಾಡಾನೆಗಳು ಬೇರೆ ಕಡೆ ಇವೆ ಎಂದು ಮಾಹಿತಿ ನೀಡಿದ್ದರು. ಆದ್ದರಿಂದ ತೋಟದಲ್ಲಿ ಭಾನುವಾರ ಕೆಲಸ ಆರಂಭಿಸಲಾಗಿತ್ತು. ಅರಣ್ಯ ಇಲಾಖೆಯ ಬೇಜವಾಬ್ದಾರಿಯಿಂದ ಮತ್ತೊಂದು ಜೀವ ಹಾನಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಂದು ವರ್ಷದ ಅವಧಿಯಲ್ಲಿ ಈ ಭಾಗದಲ್ಲಿ 9 ಜನ ಬಲಿಯಾಗಿದೆ. ಆದರೂ, ಅರಣ್ಯ ಇಲಾಖೆ ನಿರ್ಲಕ್ಷ್ಯ ವಹಿಸಿದೆ. ಆನೆಗಳ ಕಾಟ ತಪ್ಪಿಸಲು ಶಾಶ್ವತ ಕ್ರಮ ಕೈಗೊಳ್ಳಬೇಕು. ಅಲ್ಲಿಯ ತನಕ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಕಾಡಾನೆ ಸೆರೆ: ಕಡಬಗೆರೆಯಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದರೆ ಮತ್ತೊಂದೆಡೆ ಅರಣ್ಯ ಇಲಾಖೆ ಆನೆ ಸೆರೆ ಕಾರ್ಯಾಚರಣೆ ಮುಂದುವರಿಸಿದ್ದು, ಆನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಬೆರಣಗೋಡು ಸಮೀಪದ ಕೆರೆಮನೆ ಬಳಿ ಕಾಡಾನೆಗೆ ಅರಿವಳಿಕೆ ಚುಚ್ಚುಮದ್ದನ್ನು ಅಧಿಕಾರಿಗಳು ಮತ್ತು ವೈದ್ಯರ ತಂಡ ನೀಡಿದೆ. ಸಾಕಾನೆಗಳ ಮೂಲಕ ಆನೆಯನ್ನು ರಸ್ತೆಗೆ ತಂದು ಲಾರಿಗೆ ತುಂಬಿಸಿ ಸ್ಥಳಾಂತರ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.